ಕೇಪ್‌ಟೌನ್(ನ.17): ಕ್ರಿಕೆಟ್ ಜಗತ್ತು 2019ರ ವಿಶ್ವಕಪ್ ಟೂರ್ನಿಗೆ ಕಾದು ಕುಳಿತಿದೆ. ಎಲ್ಲಾ ತಂಡಗಳು ಈಗಾಗಲೇ ತಯಾರಿ ಆರಂಭಿಸಿದೆ. ಇದರ ಬೆನ್ನಲ್ಲೇ ಈ ಬಾರಿಯ ವಿಶ್ವಕಪ್ ಗೆಲ್ಲೋ ತಂಡ ಯಾವುದು ಅನ್ನೋ ಚರ್ಚೆ ಶುರುವಾಗಿದೆ.

2019ರ ವಿಶ್ವಕಪ್ ಕುರಿತು ಸೌತ್ಆಫ್ರಿಕಾ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ.  ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಸೌತ್ಆಫ್ರಿಕಾ ಈ ಬಾರಿಯ ವಿಶ್ವಕಪ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲಿದೆ ಎಂದಿದ್ದಾರೆ. ಆದರೆ ಟೀಂ ಇಂಡಿಯಾ ಹಾಗೂ ಆತಿಥೇಯ ಇಂಗ್ಲೆಂಡ್ ಪ್ರಶಸ್ತಿ ಗೆಲ್ಲೋ ನೆಚ್ಚಿನ ತಂಡ ಎಂದು ಎಬಿಡಿ ಭವಿಷ್ಯ ಹೇಳಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿ ಗೆದ್ದಿರುವ ಸೌತ್ಆಫ್ರಿಕಾ ತಂಡ ಬಲಿಷ್ಠವಾಗಿದೆ. ಹೀಗಾಗಿ  ಹರಿಣಗಳಿಗೆ ಪ್ರಶಸ್ತಿ ಗೆಲ್ಲೋ ಅವಕಾಶವಿದೆ. ಇನ್ನು ಇಂಗ್ಲೆಂಡ್ ತಂಡಕ್ಕೆ ತವರಿನ ಕಂಡೀಷ್ ಸಹಕಾರಿಯಾಗಿದೆ. ಆದರೆ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ನಿಗಧಿತ ಓವರ್ ಕ್ರಿಕೆಟ್‌ನಲ್ಲಿ ಯಾವುದೇ ಪಿಚ್‌ನಲ್ಲೂ ಅತ್ಯುತ್ತಮ ಪ್ರದರ್ಶನ ನೀಡಲಿದೆ ಎಂದಿದ್ದಾರೆ.