ಧರ್ಮಶಾಲಾದಲ್ಲಿ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಪ್ರಭಾವಿ ಬ್ಯಾಟಿಂಗ್ ನಡೆಸುವ ಸಾಧ್ಯತೆಯಿದೆ ಎಂದು ಗಿಲ್‌ಕ್ರಿಸ್ಟ್ ತಿಳಿಸಿದ್ದಾರೆ.

ನವದೆಹಲಿ(ಮಾ.23): ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ‘ಗ್ರೇಟ್ ಲೀಡರ್’ ಎನಿಸಿದ್ದಾರೆ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ವಿಕೆಟ್ ಕೀಪರ್ ಆ್ಯಡಮ್ ಗಿಲ್‌ಕ್ರಿಸ್ಟ್ ಹೇಳಿದ್ದಾರೆ.

ಆಸೀಸ್ ವಿರುದ್ಧದ ಟೆಸ್ಟ್ ಸರಣಿಯ ಆರಂಭದಿಂದಲೂ ಆಕ್ರಮಣಾಕಾರಿಯಾಗಿರುವ ಕೊಹ್ಲಿ, ಶನಿವಾರದಿಂದ ಧರ್ಮಶಾಲಾದಲ್ಲಿ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಪ್ರಭಾವಿ ಬ್ಯಾಟಿಂಗ್ ನಡೆಸುವ ಸಾಧ್ಯತೆಯಿದೆ ಎಂದು ಗಿಲ್‌ಕ್ರಿಸ್ಟ್ ತಿಳಿಸಿದ್ದಾರೆ.

ಸರಣಿಯ ಕೊನೆಯ ಪಂದ್ಯದಲ್ಲಿ ಕೊಹ್ಲಿ ಹೆಚ್ಚಿನ ರನ್‌'ಗಳಿಸಲಿದ್ದಾರೆ ಎನ್ನುವ ಭಯ ಕಾಡುತ್ತಿದೆ ಎಂದಿದ್ದಾರೆ. ಕ್ರಿಕೆಟ್ ಆಟದಲ್ಲಿ ಅದರಲ್ಲೂ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಪಂದ್ಯಗಳಲ್ಲಿ ಆಟಗಾರರ ಕೆಸರೆರಚಾಟ ಸಾಮಾನ್ಯ. ಇದರಿಂದ ಉಭಯ ತಂಡಗಳ ಕೆಲ ಆಟಗಾರರು ಬೇಸರಿಸಿಕೊಳ್ಳುವ ಸಾಧ್ಯತೆಯೂ ಇದೆ ಎಂದು ಗಿಲ್‌ಕ್ರಿಸ್ಟ್ ಹೇಳಿದರು. ಹಾಗೇ ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡದ ಪ್ರದರ್ಶನ ನಿಜಕ್ಕೂ ಅಚ್ಚರಿ ಮೂಡಿಸಿದೆ ಎಂದರು.