ಬೆಂಗಳೂರು(ಜ.21): ಐರ್ಲೆಂಡ್ ವಿರುದ್ಧದ ಸರಣಿಗಾಗಿ ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಇದೀಗ ಭಾರತಕ್ಕೆ ಬಂದಿಳಿದಿದೆ. ಇದೇ ಮೊದಲ ಬಾರಿಗೆ ಅಫ್ಘಾನಿಸ್ತಾನ ಹಾಗೂ ಐರ್ಲೆಂಡ್ ನಡುವಿನ ಸರಣಿಗೆ ಭಾರತ ಆತಿಥ್ಯವಹಿಸುತ್ತಿದೆ. ಪಂದ್ಯಕ್ಕೂ ಮುನ್ನ ಆಯೋಜಿಸಿರುವ ತರಬೇತಿ ಶಿಭಿರಕ್ಕಾಗಿ ಅಫ್ಘಾನ್ ಟೀಂ ಬೆಂಗಳೂರಿಗೆ ಆಗಮಿಸಿದೆ.

ಇದನ್ನೂ ಓದಿ: ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪ್ರಕಟ- ನಂ.1 ಸ್ಥಾನ ಕಾಪಾಡಿಕೊಂಡ ಕೊಹ್ಲಿ!

ಅಫ್ಘಾನಿಸ್ತಾನ ಹಾಗೂ ಐರ್ಲೆಂಡ್ ನಡುವೆ 3 ಟಿ20, 5 ಏಕದಿನ ಹಾಗೂ ಏಕೈಕ ಟೆಸ್ಟ್ ಪಂದ್ಯ ಆಯೋಜಿಸಲಾಗಿದೆ. ಎಲ್ಲಾ ಪಂದ್ಯಗಳು ಡೆಹ್ರಡೂನ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಫೆಬ್ರವರಿ 21 ರಂದು ಆರಂಭಗೊಳ್ಳಲಿರುವ ಸರಣಿ ಮಾರ್ಚ್ 19ಕ್ಕೆ ಅಂತ್ಯಗೊಳ್ಳಲಿದೆ.

 

 

ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ, ಬಿಗ್‌ಬಾಸ್ ಖ್ಯಾತಿಯ ಎನ್.ಸಿ ಅಯ್ಯಪ್ಪ!

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಫ್ಘಾನಿಸ್ತಾನ ಕ್ರಿಕೆಟ್ ತಂಡಕ್ಕೆ ತರಬೇತಿ ಶಿಬಿರ ಆಯೋಜಿಸಲಾಗಿದೆ. ಈ ಕುರಿತು ಅಫ್ಘಾನ್ ಕ್ರಿಕೆಟ್ ಮಂಡಳಿಯ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದೆ.