ಪಾಕಿಸ್ತಾನ್ ಕ್ರಿಕೆಟಿಗ ಶಾಹಿದ್ ಅಫ್ರಿದಿ ಇದೇ ತಿಂಗಳು ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದಲಿದ್ದಾರೆ.
ಈಗಾಗಲೇ ಟೆಸ್ಟ್ ಮತ್ತು ಏಕದಿನ ಮಾದರಿಗೆ ನಿವೃತ್ತಿ ಘೋಷಿಸಿರುವ ಅಫ್ರಿದಿ, ಈಗ ಟಿ20ಗೂ ವಿದಾಯ ಹೇಳಲಿದ್ದಾರೆ ಎನ್ನಲಾಗಿದೆ.
ಯುಎಇನಲ್ಲಿ ಈ ತಿಂಗಳು 23ರಿಂದ 27ವರೆಗೆ ನಡೆಯುವ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಅವರ ಪಾಲಿಗೆ ಕೊನೆ ಸರಣಿಯಾಗಲಿದೆ.
ವಿದಾಯದ ಪಂದ್ಯ ಆಡಲು ಅವಕಾಶ ಮಾಡಿಕೊಡಬೇಕು ಎಂದು ಅಫ್ರಿದಿ ಕೇಳಿಕೊಂಡಿದ್ದರ ಹಿನ್ನಲೆಯಲ್ಲಿ ಅವರಿಗೆ ಪಾಕ್ ಟಿ20 ತಂಡದಲ್ಲಿ ಸ್ಥಾನ ನೀಡಲಾಗಿದೆ.
