2013ರಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಇಲ್ಲಿ ಕೊನೆಯ ಏಕದಿನ ಪಂದ್ಯ ನಡೆದಿತ್ತು. ಇದರಲ್ಲಿ ಪ್ರವಾಸಿಗರು ನೀಡಿದ್ದ 350 ರನ್‌'ಗಳ ಗುರಿಯನ್ನು ಭಾರತ ಯಶಸ್ವಿಯಾಗಿ ಬೆನ್ನತ್ತಿ ಗೆಲುವಿನ ನಗೆ ಬೀರಿತ್ತು.

ನಾಗ್ಪುರ(ಸೆ.30): ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಏಕದಿನ ಪಂದ್ಯವು ಇಲ್ಲಿನ ವಿದರ್ಭ ಅಂಗಣದಲ್ಲಿ ನಡೆಯಲಿದ್ದು, 4 ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಏಕದಿನ ಪಂದ್ಯವೊಂದಕ್ಕೆ ವಿದರ್ಭ ಕ್ರೀಡಾಂಗಣ ಆತಿಥ್ಯ ವಹಿಸುತ್ತಿದೆ.

2013ರಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಇಲ್ಲಿ ಕೊನೆಯ ಏಕದಿನ ಪಂದ್ಯ ನಡೆದಿತ್ತು. ಇದರಲ್ಲಿ ಪ್ರವಾಸಿಗರು ನೀಡಿದ್ದ 350 ರನ್‌'ಗಳ ಗುರಿಯನ್ನು ಭಾರತ ಯಶಸ್ವಿಯಾಗಿ ಬೆನ್ನತ್ತಿ ಗೆಲುವಿನ ನಗೆ ಬೀರಿತ್ತು. ಇದಾದ ಬಳಿಕ ಇಲ್ಲಿನ ಪಿಚ್ ಬಗ್ಗೆ ಅಪಸ್ವರಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳು ಇಲ್ಲಿ ನಡೆಸಿರಲಿಲ್ಲ.

2015ರಲ್ಲಿ ಭಾರತ-ದ.ಆಫ್ರಿಕಾ ನಡುವಿನ ಟೆಸ್ಟ್ ಪಂದ್ಯ ಮೂರೇ ದಿನದಲ್ಲಿ ಕೊನೆಗೊಂಡ ಬಳಿಕ ಐಸಿಸಿ, ಪಿಚ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತ್ತು. ಅಲ್ಲದೇ 2016ರಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ಭಾರತ 79 ರನ್‌'ಗಳಿಗೆ ಆಲೌಟ್ ಆಗಿತ್ತು. ಈ ಹಿನ್ನೆಲೆಯಲ್ಲಿ ಪಿಚ್ ಬಗ್ಗೆ ಟೀಕೆಗಳು ಮತ್ತಷ್ಟು ಹೆಚ್ಚಾಗಿತ್ತು.