ಬಹುತೇಕ ಮಂದಿ ಧವನ್ ಅನುಪಸ್ಥಿತಿಯಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯಬಹುದು ಎಂದು ಲೆಕ್ಕಾಚಾರ ಹಾಕಿದ್ದರು.
ಚೆನ್ನೈ(ಸೆ.16): ಭಾರತ ತಂಡದ ಉಪನಾಯಕ ರೋಹಿತ್ ಶರ್ಮಾ, ಶಿಖರ್ ಧವನ್ ಅನುಪಸ್ಥಿತಿಯಲ್ಲಿ ತಮ್ಮೊಂದಿಗೆ ಅಜಿಂಕ್ಯ ರಹಾನೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
‘ಧವನ್ ಅನುಪಸ್ಥಿತಿ ಕಾಡಲಿದೆ. ಆದರೆ ಅವರ ಸ್ಥಾನವನ್ನು ಸಮರ್ಥವಾಗಿ ತುಂಬಬಲ್ಲ ಆಟಗಾರರು ತಂಡದಲ್ಲಿದ್ದಾರೆ. ವಿಂಡೀಸ್'ನಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ರಹಾನೆ ಆರಂಭಿಕನ ಸ್ಥಾನಕ್ಕೆ ಸೂಕ್ತರು ಎಂದು ಮುಂಬೈ ಕ್ರಿಕೆಟಿಗ ಮುಂಬೈ ಕ್ರಿಕೆಟಿಗ ಅಭಿಪ್ರಾಯಪಟ್ಟಿದ್ದಾರೆ
ರಾಹುಲ್ ಆರಂಭಿಕನಾಗಿ ಆಡುವ ಸಾಧ್ಯತೆ ಕಡಿಮೆ. ಅವರನ್ನು 4ನೇ ಕ್ರಮಾಂಕದಲ್ಲೇ ಆಡಿಸಲು ತಂಡ ನಿರ್ಧರಿಸಿದೆ’ ಎಂದು ರೋಹಿತ್ ಹೇಳಿದ್ದಾರೆ.
ಬಹುತೇಕ ಮಂದಿ ಧವನ್ ಅನುಪಸ್ಥಿತಿಯಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯಬಹುದು ಎಂದು ಲೆಕ್ಕಾಚಾರ ಹಾಕಿದ್ದರು. ಆದರೆ ಇದೀಗ ತಂಡದ ಉಪನಾಯಕ ಈ ರೀತಿ ಹೇಳಿರುವುದು ರಾಹುಲ್ ಓಪನರ್ ಆಗುವ ಸಾಧ್ಯತೆ ಕಡಿಮೆ ಎನಿಸಿದೆ. ಟೆಸ್ಟ್ ಆರಂಭಿಕ ಬ್ಯಾಟ್ಸ್'ಮನ್ ರಾಹುಲ್, ಆಸೀಸ್ ವಿರುದ್ಧ ಮತ್ತೊಮ್ಮೆ ಆರಂಭಿಕನಾಗಿ ಕಣಕ್ಕಿಳಿಯುವ ಆಸೆಗೆ ತಣ್ಣೀರೆರಚಿದಂತಾಗಿದೆ.
