ಮುಂಬೈ(ಸೆ.09): ಬಾಲಿವುಡ್‌ನಲ್ಲಿ ಕ್ರೀಡಾ ಸಾಧಕರ ಆತ್ಮಚರಿತ್ರೆಗಳು ಹೆಚ್ಚು ಯಶಸ್ಸು ಕಾಣುತ್ತಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾದ 1983ರ ವಿಶ್ವಕಪ್ ಗೆಲುವಿನ ಕುರಿತು ಬಾಲಿವುಡ್ ಚಿತ್ರ ಸೆಟ್ಟೇರಿ ಹಲವು ದಿನಗಳೇ ಉರುಳಿದೆ.

1983ರಲ್ಲಿ ಕಪಿಲ್ ದೇವ್ ನಾಯಕತ್ವದವ ಟೀಂ ಇಂಡಿಯಾ ಚೊಚ್ಚಲ ಬಾರಿಗೆ ವಿಶ್ವಕಪ್ ಪ್ರಶಸ್ತಿ ಗೆದ್ದು ದಾಖಲೆ ಬರೆದಿತ್ತು. ಈ ಎಲ್ಲಾ ಅಂಶಗಳನ್ನೊಳಗೊಂಡ 1983ರ ವಿಶ್ವಕಪ್ ಚಿತ್ರವನ್ನ ಬಾಲಿವುಡ್ ಖ್ಯಾತ ನಿರ್ದೇಶಕ ಕಬೀರ್ ಖಾನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಕಪಿಎಲ್ ದೇವ್ ಪಾತ್ರದಲ್ಲಿ ರಣವೀರ್ ಸಿಂಗ್ ಈಗಾಗಲೇ ಹಲವು ಸೀನ್‌ಗಳ  ಶೂಟಿಂಗ್ ಮುಗಿಸಿದ್ದಾರೆ. ಇದೀಗ 1983ರ ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಕಷ್ಣಮಾಚಾರಿ ಶ್ರೀಕಾಂತ್ ಪಾತ್ರದಲ್ಲಿ ತೆಲುಗು ನಟ ಅಲ್ಲು ಅರ್ಜುನ್ ಕಾಣಿಸಿಕೊಳ್ಳಲಿದ್ದಾರೆ.

ವಿಶ್ವಕಪ್ 1983 ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸೋ ಮೂಲಕ ತೆಲುಗು ಸ್ಟಾರ್ ಅಲ್ಲು ಅರ್ಜುನ್ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ. ಸದ್ಯ ಚಿತ್ರ ತಂಡ ಪ್ರೀ ಪ್ರೊಡಕ್ಷನ್ ಕಾರ್ಯದಲ್ಲಿ ಬ್ಯುಸಿಯಾಗಿದೆ. ಶೂಟಿಂಗ್ ಹಾಗೂ ಪೋಸ್ಟ್ ಪ್ರೊಡಕ್ಷನ್‌ ಮುಗಿಸಿ ಚಿತ್ರ ತೆರೆಗೆ ಬರಲು ಕನಿಷ್ಟ ಒಂದು ವರ್ಷವಾದರು ಬೇಕು.