ಮುಂಬೈ(ಏ.15): 2019ರ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದೆ.  ಎಂ.ಎಸ್.ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ 15 ಸದಸ್ಯರ ತಂಡ ಪ್ರಕಟಿಸಿದೆ. 2019ರ ಆರಂಭದಿಂದಲೇ ಆಯ್ಕೆ ಸಮಿತಿ ತಂಡದ ಆಯ್ಕೆ ಕಸರತ್ತು ನಡೆಸಿದೆ. ಇದೀಗ ಅಳೆದು ತೂಗಿ ತಂಡವನ್ನು ಪ್ರಕಟಿಸಲಾಗಿದೆ. ಈ ಭಾರಿ ವಿಶ್ವಕಪ್ ಟ್ರೋಫಿ ಮೇಲೆ ಕಣ್ಣಿಟ್ಟಿರುವ ಟೀಂ ಇಂಡಿಯಾ ಇತಿಹಾಸ ರಚಿಸಲು ಸಜ್ಜಾಗಿದೆ. ಹೀಗಾಗಿ ಹಲವು ಕ್ರಿಕೆಟಿಗರಿಗೆ ಆಯ್ಕೆ ಸಮಿತಿ ಶಾಕ್ ನೀಡಿದೆ.

ಇದನ್ನೂ ಓದಿ: ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟ; ಕನ್ನಡಿಗನಿಗೆ ಚಾನ್ಸ್

4ನೇ ಕ್ರಮಾಂಕ ಹೆಚ್ಚು ಸುದ್ದಿಯಾಗಿತ್ತು. ಅಂಬಾಟಿ ರಾಯುಡು, ವಿಜಯ್ ಶಂಕರ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ ನೀರಸ ಪ್ರದರ್ಶನ ನೀಡಿರುವ ರಾಯುಡು ಬದಲು ವಿಜಯ್ ಶಂಕರ್‌ಗೆ ಮಣೆಹಾಕಲಾಗಿದೆ. ಈ ಮೂಲಕ ರಾಯುಡುಗೆ ಶಾಕ್ ನೀಡಲಾಗಿದೆ. ಇತ್ತ ಬ್ಯಾಕ್ ಅಪ್ ವಿಕೆಟ್ ಕೀಪರ್ ಆಗಿ ರಿಷಬ್ ಪಂತ್‌ಗೆ ಶಾಕ್ ನೀಡಿರುವ ಬಿಸಿಸಿಐ, ದಿನೇಶ್ ಕಾರ್ತಿಕ್‌ಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಏಕದಿನ ವಿಶ್ವಕಪ್ ಟೂರ್ನಿಗೆ ಬಲಿಷ್ಠ ತಂಡ ಪ್ರಕಟಿಸಿದ ನ್ಯೂಜಿಲೆಂಡ್

ವೇಗಿಗಳಲ್ಲಿ ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಹಾಗೂ ಮೊಹಮ್ಮದ್ ಶಮಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ಉಮೇಶ್ ಯಾದವ್‌ಗೆ ಕೊಕ್ ನೀಡಲಾಗಿದೆ. ಸ್ಪಿನ್ ವಿಭಾಗದಲ್ಲಿ ಕುಲ್ದೀಪ್ ಯಾದವ್ ಹಾಗೂ ಯಜುವೇಂದ್ರ ಚಹಾಲ್ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. ಹೀಗಾಗಿ ಆರ್ ಅಶ್ವಿನ್‌ಗೆ ಶಾಕ್ ನೀಡಿದೆ.  ಇವರ ಜೊತೆ ಸುರೇಶ್ ರೈನಾ, ಯುವರಾಜ್ ಸಿಂಗ್ ಸೇರಿದಂತೆ ಹಿರಿಯ ಹಾಗೂ ಅನುಭವಿ ಆಟಗಾರರಿಗೆ ಶಾಕ್ ನೀಡಿದೆ.