ಇಂಗ್ಲೆಂಡ್ ನೆಲದಲ್ಲಿ ಟಿ20 ಸರಣಿ ಗೆದ್ದ ನಾಯಕ ವಿರಾಟ್ ಕೊಹ್ಲಿಗೆ ಪತ್ನಿ ಅನುಷ್ಕಾ ಶರ್ಮಾ ನೀಡಿದ ಗಿಫ್ಟ್ ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗಿದೆ. ಅಷ್ಟಕ್ಕೂ ಅನುಷ್ಕಾ ನೀಡಿದ ಗಿಫ್ಟ್ ಏನು? ವೈರಲ್ ಆಗಿದ್ದೇಕೆ? ಇಲ್ಲಿದೆ ಉತ್ತರ.
ಬ್ರಿಸ್ಟಲ್(ಜು.09): ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಅಂತಿಮ ಪಂದ್ಯ ಗೆಲ್ಲೋ ಮೂಲಕ ಭಾರತ 2-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿತು. ಬ್ರಿಸ್ಟಲ್‌ನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ 199ರನ್ ಟಾರ್ಗೆಟ್ ಬೆನ್ನಟ್ಟಿದ ಟೀಂ ಇಂಡಿಯಾ, ರೋಹಿತ್ ಶರ್ಮಾ ಶತಕ ಹಾಗೂ ಹಾರ್ದಿಕ್ ಪಾಂಡ್ಯ ಅಬ್ಬರದ ನೆರವಿನಿಂದ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಸರಣಿ ಗೆದ್ದಿತು.
ಸರಣಿ ಗೆದ್ದ ನಾಯಕ ವಿರಾಟ್ ಕೊಹ್ಲಿ ತಮ್ಮ ಮಹತ್ವದ ವಿದೇಶಿ ಪ್ರವಾಸದಲ್ಲಿ ಗೆಲುವಿನ ಓಟ ಮುಂದುವರಿಸಿದ್ದಾರೆ. ಟೀಂ ಇಂಡಿಯಾ ಅಂತಿಮ ಪಂದ್ಯ ಗೆದ್ದು ಸರಣಿ ಗೆಲ್ಲುತ್ತಿದ್ದಂತೆ, ನಾಯಕ ವಿರಾಟ್ ಪತ್ನಿ ಅನುಷ್ಕಾ ಶರ್ಮಾ ಸ್ಪೆಷಲ್ ಗಿಫ್ಟ್ ನೀಡಿದ್ದಾರೆ.
ಸರಣಿ ಗೆದ್ದ ಇಂಗ್ಲೆಂಡ್ ಆಟಗಾರರ ಜೊತೆ ಹಸ್ತಲಾಘವ ಮಾಡಿ ಪೆವಿಲಿಯನ್‌ಗೆ ಆಗಮಿಸುತ್ತಿದ್ದ ವಿರಾಟ್ ಕೊಹ್ಲಿಯನ್ನ ಅನುಷ್ಕಾ ಶರ್ಮಾ ತಬ್ಬಿಕೊಂಡು ಅಭಿನಂದನೆ ಸಲ್ಲಿಸಿದ್ದಾರೆ. ಕ್ರೀಡಾಂಗಣದಲ್ಲಿ ಅನುಷ್ಕಾ ಹಾಗೂ ಕೊಹ್ಲಿ ಹಗ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇಂಗ್ಲೆಂಡ್ ವಿರುದ್ಧದ ಅಂತಿಮ ಪಂದ್ಯದಲ್ಲಿ ಕ್ರಿಕೆಟಿಗರ ಪತ್ನಿಯರು ಪೆವಿಲಿಯನ್‌ನಲ್ಲಿ ಪಂದ್ಯ ವೀಕ್ಷಿಸಿದ್ದರು. ಇಷ್ಟೇ ಅಲ್ಲ, ಲೇಡಿ ಟೀಂ ಇಂಡಿಯಾ ಎಂದು ಟ್ವೀಟ್ ಮಾಡಿದ್ದರು.
