ಮುಂಬೈ ವಿರುದ್ಧದ ಗೆಲುವಿನೊಂದಿಗೆ ಆರ್’ಸಿಬಿ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದರೆ, ಮತ್ತೊಂದು ಕಡೆ ಅನುಷ್ಕಾ ಶರ್ಮಾ ಹುಟ್ಟುಹಬ್ಬಕ್ಕೆ ಕೊಹ್ಲಿ ಗೆಲುವಿನ ಕಾಣಿಕೆ ನೀಡಿದ್ದಾರೆ.
ಬೆಂಗಳೂರು[ಮಾ.02]: ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೊನೆಗೂ ಜಯದ ಹಳಿಗೆ ಮರಳಿದೆ. ಇದು ವಿರಾಟ್ ಕೊಹ್ಲಿಗೆ ಡಬಲ್ ಧಮಾಕ. ಮುಂಬೈ ವಿರುದ್ಧದ ಗೆಲುವಿನೊಂದಿಗೆ ಆರ್’ಸಿಬಿ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದರೆ, ಮತ್ತೊಂದು ಕಡೆ ಅನುಷ್ಕಾ ಶರ್ಮಾ ಹುಟ್ಟುಹಬ್ಬಕ್ಕೆ ಕೊಹ್ಲಿ ಗೆಲುವಿನ ಕಾಣಿಕೆ ನೀಡಿದ್ದಾರೆ.
ಮೇ.01 ರಂದು ಅನುಷ್ಕಾ ಶರ್ಮಾ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ವೇಳೆ ಕೊಹ್ಲಿ ಈ ರೀತಿ ಟ್ವೀಟ್ ಮಾಡಿದ್ದರು.
ಇದಕ್ಕೆ ಇನ್’ಸ್ಟಾಗ್ರಾಂನಲ್ಲಿ ಪ್ರತಿಕ್ರಿಯಿಸಿದ ಅನುಷ್ಕಾ ಶರ್ಮಾ, ಜಗತ್ತಿನ ಹೃದಯವಂತ, ಧೈರ್ಯವಂತನೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಂಡೆ. ಈ ದಿನವನ್ನು ಸುಂದರವನ್ನಾಗಿಸಿದ್ದಕ್ಕೆ ಥ್ಯಾಂಕ್ಸ್ ಎಂಬರ್ಥದಲ್ಲಿ ಅನುಷ್ಕಾ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. ಈ ಬರಹವೀಗ ಸಾಮಾಜಿಕ ಜಾಲತಾಣಗಳಲ್ಲಿ ವಿರುಷ್ಕಾ ಅಭಿಮಾನಿಗಳ ಹೃದಯ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
