ಬಿಸಿಸಿಐ ಅರ್ಜುನ್ ತೆಂಡುಲ್ಕರ್ ನೆಟ್ಸ್‌'ನಲ್ಲಿ ಬೌಲಿಂಗ್ ಮಾಡುತ್ತಿರುವ ಫೋಟೋಗಳನ್ನು ಸಾಮಾಜಿಕ ತಾಣಗಳಲ್ಲಿ ಹಾಕಿದ್ದು, ಅಭಿಮಾನಿಗಳ ಗಮನ ಸೆಳೆದಿದೆ.
ಮುಂಬೈ(ಅ.20): ನ್ಯೂಜಿಲೆಂಡ್ ವಿರುದ್ಧ ಇದೇ ಭಾನುವಾರದಿಂದ ಆರಂಭವಾಗಲಿರುವ ಮೊದಲ ಏಕದಿನ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿತು.
ಈ ವೇಳೆ ನೆಟ್ಸ್'ನಲ್ಲಿ ಭಾರತೀಯ ಬ್ಯಾಟ್ಸ್ಮನ್'ಗಳಿಗೆ ಸಚಿನ್ ತೆಂಡುಲ್ಕರ್ ಅವರ ಪುತ್ರ ಅರ್ಜುನ ತೆಂಡುಲ್ಕರ್ ಬೌಲಿಂಗ್ ಮಾಡಿ ಗಮನ ಸೆಳೆದರು. ನಾಯಕ ವಿರಾಟ್ ಕೊಹ್ಲಿ, ಉಪನಾಯಕ ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಬ್ಯಾಟ್ಸ್ಮನ್ಗಳ ಅಭ್ಯಾಸಕ್ಕೆ ಅರ್ಜುನ್ ನೆರವಾದರು.
ಬಿಸಿಸಿಐ ಅರ್ಜುನ್ ತೆಂಡುಲ್ಕರ್ ನೆಟ್ಸ್'ನಲ್ಲಿ ಬೌಲಿಂಗ್ ಮಾಡುತ್ತಿರುವ ಫೋಟೋಗಳನ್ನು ಸಾಮಾಜಿಕ ತಾಣಗಳಲ್ಲಿ ಹಾಕಿದ್ದು, ಅಭಿಮಾನಿಗಳ ಗಮನ ಸೆಳೆದಿದೆ.
