ಆ್ಯಷಸ್ ಕದನ: ಆಸೀಸ್ ದಾಳಿಗೆ ಇಂಗ್ಲೆಂಡ್ ಸರ್ವಪತನ..!

ಕ್ರಿಕೆಟ್ ಕಾಶಿ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಎರಡನೇ ಆ್ಯಷಸ್ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಕೇವಲ 258 ರನ್‌ಗಳಿಗೆ ಸರ್ವಪತನ ಕಂಡಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

Ashes 2019 England Cricket Team 258 all out in second Test

ಲಂಡನ್‌[ಆ.16]: ಆ್ಯಷಸ್ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಸಂಘಟಿತ ಬೌಲಿಂಗ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ ಕೇವಲ 258 ರನ್’ಗಳಿಗೆ ಸರ್ವಪತನ ಕಂಡಿದೆ. ಇನ್ನು ಮೊದಲ ಇನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ಆರಂಭಿಕ ಆಘಾತ ಅನುಭವಿಸಿದ್ದು, ಡೇವಿಡ್ ವಾರ್ನರ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಆ್ಯಷಸ್ ಸರಣಿ : 2ನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ರಕಟ!

ಆ್ಯಷಸ್‌ ಸರಣಿಯ 2ನೇ ಟೆಸ್ಟ್‌ನಲ್ಲಿ ಟಾಸ್‌ ಗೆದ್ದ ಆಸ್ಪ್ರೇಲಿಯಾ, ಮೊದಲು ಆತಿಥೇಯ ಇಂಗ್ಲೆಂಡ್‌ ತಂಡವನ್ನು ಬ್ಯಾಟ್‌ ಮಾಡುವಂತೆ ಆಹ್ವಾನಿಸಿತು. ತಂಡಕ್ಕೆ ವಾಪಸಾದ ವೇಗಿ ಜೋಸ್ ಹೇಜಲ್‌ವುಡ್‌ ದಾಳಿಗೆ ಇಂಗ್ಲೆಂಡ್‌ನ ಅಗ್ರ ಕ್ರಮಾಂಕ ತತ್ತಿರಿಸಿತು. ಖಾತೆ ತೆರೆಯುವ ಮೊದಲೇ ಆರಂಭಿಕ ಜೇಸನ್‌ ರಾಯ್‌ ವಿಕೆಟ್‌ ಕಳೆದುಕೊಂಡ ಇಂಗ್ಲೆಂಡ್‌ 138 ರನ್‌ಗೆ 6 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಇಂಗ್ಲೆಂಡ್ ಕೆಳ ಕ್ರಮಾಂಕದ ಬ್ಯಾಟ್ಸ್’ಮನ್’ಗಳ ಹೋರಾಟದ ನೆರವಿನಿಂದ ತಂಡ ಗೌರವಾನ್ವಿತ ಮೊತ್ತ ಕಲೆಹಾಕುವಂತೆ ಮಾಡಿದರು. ಪ್ಯಾಟ್ ಕಮಿನ್ಸ್, ಹೇಜಲ್’ವುಡ್ ಹಾಗೂ ಸ್ಪಿನ್ನರ್ ನೇಥನ್ ಲಯನ್ ತಲಾ 3 ವಿಕೆಟ್ ಪಡೆದು ಮಿಂಚಿದರು.

8 ಕೆಟ್ಟ ತೀರ್ಪು ಕೊಟ್ಟ ಅಂಪೈರ್‌ಗೆ ’ಕುರುಡ’ನ ಪಟ್ಟ ಕೊಟ್ಟ ಅಭಿಮಾನಿ..!

ಆ್ಯಷಸ್ ಸರಣಿಯ ಎರಡನೇ ಪಂದ್ಯದ ಮೊದಲ ದಿನ ಮಳೆಗೆ ಆಹುತಿಯಾಗಿತ್ತು. ಇದೀಗ ಎರಡನೇ ದಿನ 11 ವಿಕೆಟ್ ಉರುಳಿವೆ. ಹೀಗಾಗಿ ಮೂರನೇ ದಿನ ಪಂದ್ಯ ಇನ್ನಷ್ಟು ರೋಚಕತೆಗೆ ಸಾಕ್ಷಿಯಾಗುವ ಸಾಧ್ಯತೆಯಿದೆ. ಈಗಾಗಲೇ ಮೊದಲ ಟೆಸ್ಟ್ ಪಂದ್ಯವನ್ನು ಜಯಿಸಿರುವ ಆಸ್ಟ್ರೇಲಿಯಾ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ.

ಸಂಕ್ಷಿಪ್ತ ಸ್ಕೋರ್:
ಇಂಗ್ಲೆಂಡ್: 258/10
ಅಸ್ಟ್ರೇಲಿಯಾ: 30/1

[* ಎರಡನೇ ದಿನದಾಟ ಮುಕ್ತಾಯದ ವೇಳೆಗೆ]
 

Latest Videos
Follow Us:
Download App:
  • android
  • ios