5 ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ ಈಗಾಗಲೇ ಭಾರತ ವಿರುದ್ಧ 3-0 ಅಂತರದಲ್ಲಿ ಸರಣಿ ಕೈಚೆಲ್ಲಿದೆ.
ಬೆಂಗಳೂರು(ಸೆ.25): ಈಗಾಗಲೇ ಸರಣಿ ಕೈಚೆಲ್ಲಿ ನಿರಾಸೆ ಅನುಭವಿಸುತ್ತಿರುವ ಆಸ್ಟ್ರೇಲಿಯಾ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಆಸ್ಟ್ರೇಲಿಯಾ ತಂಡದ ಸ್ಟಾರ್ ಎಡಗೈ ಸ್ಪಿನ್ನರ್ ಆಸ್ಟನ್ ಅಗರ್ ಗಾಯದ ಸಮಸ್ಯೆಯಿಂದಾಗಿ ಮುಂದಿನ 2 ಪಂದ್ಯಗಳಿಗೆ ತಂಡದಿಂದ ಹೊರಬಿದ್ದಿದ್ದಾರೆ.
ಇಂದೋರ್’ನಲ್ಲಿ ನಡೆದ ಮೂರನೇ ಪಂದ್ಯದ ವೇಳೆ ಬಲ ಕಿರುಬೆರಳಿನ ಗಾಯಕ್ಕೆ ತುತ್ತಾಗಿದ್ದರು. ಎಕ್ಸ್ ರೇ ನಡೆಸಿದಾಗ ಕಿರುಬೆರಳಿಗೆ ಗಾಯವಾಗಿರುವುದು ಸ್ಪಷ್ಟವಾಗಿರುವುದರಿಂದ, ಹೆಚ್ಚಿನ ಚಿಕಿತ್ಸೆಗಾಗಿ ತವರಿಗೆ ಮರಳಿದ್ದಾರೆ.
ಆದರೆ ಕ್ರಿಕೆಟ್ ಆಸ್ಟ್ರೇಲಿಯಾ ಇಲ್ಲಿಯವರೆಗೆ ಅಗರ್ ಬದಲಿಗೆ ಹೊಸ ಆಟಗಾರನನ್ನು ತಂಡಕ್ಕೆ ಆಯ್ಕೆ ಮಾಡಿಕೊಂಡಿಲ್ಲ.
5 ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ ಈಗಾಗಲೇ ಭಾರತ ವಿರುದ್ಧ 3-0 ಅಂತರದಲ್ಲಿ ಸರಣಿ ಕೈಚೆಲ್ಲಿದೆ.
