ಈ ವೇಳೆ ನೋವಿಗೆ ತುತ್ತಾಗಿದ್ದ ಅಶ್ವಿನ್ ಅವರಿಗೆ ತಂಡದ ಪಿಸಿಯೋ ಸ್ಥಳದಲ್ಲೇ ಚಿಕಿತ್ಸೆ ನೀಡಿದರು.

ಲಂಡನ್(ಜೂ.17): ಚಾಂಪಿಯನ್ಸ್ ಟ್ರೋಫಿ ಫೈನಲ್ ಮುನ್ನ ಭಾರತಕ್ಕೆ ದೊಡ್ಡ ಆಘಾತ ಎದುರಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು ಅಭ್ಯಾಸ ನಡೆಸುತ್ತಿದ್ದ ವೇಳೆಯಲ್ಲಿ ಭಾರತದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮಂಡಿನೋವಿಗೆ ತುತ್ತಾಗಿದ್ದಾರೆ.

ಭಾನುವಾರ ಪಾಕಿಸ್ತಾನ ವಿರುದ್ಧ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ನಡೆಯಲಿದ್ದು, ಇದಕ್ಕಾಗಿ ಭಾರತ ತಂಡದ ಆಟಗಾರರು ಮೈದಾನದಲ್ಲಿ ಅಭ್ಯಾಸ ನಡೆಸಿ ಬೆವರಿಳಿಸಿದರು. ಕ್ಷೇತ್ರರಕ್ಷಣೆ ಅಭ್ಯಾಸ ನಡೆಸುವ ಸಂದರ್ಭದಲ್ಲಿ ಕ್ಯಾಚ್ ಹಿಡಿಯುವಾಗ ಬಲಗಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

ಈ ವೇಳೆ ನೋವಿಗೆ ತುತ್ತಾಗಿದ್ದ ಅಶ್ವಿನ್ ಅವರಿಗೆ ತಂಡದ ಪಿಸಿಯೋ ಸ್ಥಳದಲ್ಲೇ ಚಿಕಿತ್ಸೆ ನೀಡಿದರು. ಸುಮಾರು ಅರ್ಧ ಗಂಟೆ ವಿಶ್ರಾಂತಿ ತೆಗೆದುಕೊಂಡ ಬಳಿಕ ಮತ್ತೆ ನೆಟ್ಸ್‌'ಗೆ ಆಗಮಿಸಿದ ಅಶ್ವಿನ್ ಕೆಲ ಕಾಲ ಬೌಲಿಂಗ್ ಅಭ್ಯಾಸ ನಡೆಸಿದರು. ಘಟನೆ ಕುರಿತು ಪ್ರತಿಕ್ರಿಯಿಸಿದ ಭಾರತ ತಂಡದ ಪಿಸಿಯೋ, ಅಶ್ವಿನ್‌ಗೆ ಗಂಭೀರವಾದ ಗಾಯವೇನು ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.