ಇನ್ನು ಅಕ್ಟೋಬರ್ 6ರಿಂದ ಹರ್ಯಾಣ ವಿರುದ್ಧ ನಡೆಯಲಿರುವ ಮೊದಲ ಪಂದ್ಯಕ್ಕೆ ಸೌರಾಷ್ಟ್ರ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಲಾಗಿದ್ದು, ಜಡೇಜಾ ಹಾಗೂ ಪೂಜಾರಗೆ ಅವಕಾಶ ಕಲ್ಪಿಸಲಾಗಿದೆ.
ನವದೆಹಲಿ(ಸೆ.30): ಟೀಂ ಇಂಡಿಯಾ ಅನುಭವಿ ಆಟಗಾರರಾದ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಚೇತೇಶ್ವರ ಪೂಜಾರ, ಮುರುಳಿ ವಿಜಯ್ 2017-18ನೇ ಸಾಲಿನ ರಣಜಿ ಟ್ರೋಫಿಯ ಮೊದಲ ಹಂತದ ಪಂದ್ಯಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೂಲಗಳ ಪ್ರಕಾರ, ಅಶ್ವಿನ್ ಹಾಗೂ ವಿಜಯ್ ತಂಡದ ಪರ ಆಡಲು ಲಭ್ಯವಿರುವುದಾಗಿ ತಮಿಳು ನಾಡು ಕ್ರಿಕೆಟ್ ಸಂಸ್ಥೆಗಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನು ಅಕ್ಟೋಬರ್ 6ರಿಂದ ಹರ್ಯಾಣ ವಿರುದ್ಧ ನಡೆಯಲಿರುವ ಮೊದಲ ಪಂದ್ಯಕ್ಕೆ ಸೌರಾಷ್ಟ್ರ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಲಾಗಿದ್ದು, ಜಡೇಜಾ ಹಾಗೂ ಪೂಜಾರಗೆ ಅವಕಾಶ ಕಲ್ಪಿಸಲಾಗಿದೆ.
ಆದರೆ ಅಶ್ವಿನ್ ಹಾಗೂ ಜಡೇಜಾ ಮುಂಬರುವ ಆಸೀಸ್ ವಿರುದ್ಧದ ಟಿ20 ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದರೆ ರಣಜಿಯಲ್ಲಿ ಪಾಲ್ಗೊಳ್ಳುವುದು ಅನುಮಾನ.
