ಚೆನ್ನೈ(ಸೆ.16): 120 ಕೋಟಿ ಜನಸಂಖ್ಯೆ ಹೊಂದಿರುವ ಭಾರತೀಯರಿಗೆ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಕೇವಲ 4 ಪದಕ ಬಂದಿರುವುದು ಹಾಸ್ಯಾಸ್ಪದ ಎಂದು ಪಾಕ್ ಪ್ರಜೆಯೊಬ್ಬ ಟ್ವೀಟ್ ಮಾಡಿದ್ದಾನೆ.
ಇದಕ್ಕೆ ಕ್ರಿಕೆಟಿಗ ಆರ್.ಅಶ್ವಿನ್ ಕಟುವಾಗಿ ತಿರುಗೇಟು ನೀಡಿದ್ದಾರೆ. ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶದಲ್ಲಿ ಪಾಕಿಸ್ತಾನ 6ನೇ ಸ್ಥಾನದಲ್ಲಿದೆ. ಆದರೂ ಪ್ಯಾರಾಲಿಂಪಿಕ್ಸ್‌ನಲ್ಲಿ ಕೇವಲ 1 ಪದಕ ಗೆದ್ದಿದೆ. ಇನ್ನೊಂದು ಪದಕ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಬ್ರೆಜಿಲ್‌ನ ರಿಯೋದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಭಾರತದ ಸಾಧನೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಪತ್ರಕರ್ತ ಓಮರ್ ಕುರೇಶಿ ಟ್ವೀಟ್ ಮಾಡಿ ಭಾರತೀಯರ ಆಕ್ರೋಶಕ್ಕೆ ಕಾರಣವಾಗಿದ್ದರು.
