ಯುಎಇ[ಯುನೈಟೆಡ್ ಅರಬ್ ಎಮಿರಾಯಟ್ಸ್]ನಲ್ಲಿ ನಡೆಯುತ್ತಿರುವ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ-ಪಾಕಿಸ್ತಾನ ನಡುವಿನ ಪಂದ್ಯ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿತ್ತು. ಅದರಲ್ಲೂ 2017ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡವನ್ನು ಮಣಿಸಿ ಚಾಂಪಿಯನ್ ಆಗಿದ್ದ ಪಾಕಿಸ್ತಾನ ವಿರುದ್ಧ ಸೇಡಿನ ಪಂದ್ಯವಾಗಬಹುದು ಎಂದು ಬಹುತೇಕ ಕ್ರೀಡಾ ಪಂಡಿತರು ವಿಶ್ಲೇಷಿಸಿದ್ದರು. 

ಬೆಂಗಳೂರು[ಸೆ.21]: ಸಾಂಪ್ರದಾಯಿಕ ಎದುರಾಳಿಗಳು ಎಂದೇ ಕರೆಸಿಕೊಳ್ಳುವ ಭಾರತ-ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯವನ್ನು ನೋಡಲು ಉಭಯ ದೇಶಗಳ ಅಭಿಮಾನಿಗಳು ಯಾವಾಗಲೂ ತುದಿಗಾಲಿನಲ್ಲಿ ನಿಂತಿರುತ್ತಾರೆ. ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಅವಕಾಶ ಸಿಕ್ಕಾಗ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಲು ಹಿಂದೆ ಮುಂದೆ ನೋಡುವುದಿಲ್ಲ. ಆದರೆ ಬುಧವಾರ ನಡೆದ ಭಾರತ-ಪಾಕಿಸ್ತಾನ ನಡುವಿನ ಪಂದ್ಯ ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ಹೌದು, ಯುಎಇ[ಯುನೈಟೆಡ್ ಅರಬ್ ಎಮಿರಾಯಟ್ಸ್]ನಲ್ಲಿ ನಡೆಯುತ್ತಿರುವ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ-ಪಾಕಿಸ್ತಾನ ನಡುವಿನ ಪಂದ್ಯ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿತ್ತು. ಅದರಲ್ಲೂ 2017ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡವನ್ನು ಮಣಿಸಿ ಚಾಂಪಿಯನ್ ಆಗಿದ್ದ ಪಾಕಿಸ್ತಾನ ವಿರುದ್ಧ ಸೇಡಿನ ಪಂದ್ಯವಾಗಬಹುದು ಎಂದು ಬಹುತೇಕ ಕ್ರೀಡಾ ಪಂಡಿತರು ವಿಶ್ಲೇಷಿಸಿದ್ದರು. 

ಆದರೆ ಪಂದ್ಯ ಆರಂಭಕ್ಕೂ ಮುನ್ನ ಪಾಕಿಸ್ತಾನದ ಅಭಿಮಾನಿಯೊಬ್ಬ ಭಾರತದ ರಾಷ್ಟ್ರಗೀತೆ ಹಾಡುವ ಮೂಲಕ ಶಾಂತಿಯ ಸಂದೇಶ ಸಾರಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ...

Scroll to load tweet…