ಲೀಗ್ ಹಂತದಲ್ಲಿ ಪಾಕಿಸ್ತಾನ ಬೌಲರ್’ಗಳನ್ನು ಲೀಲಾಜಾಲವಾಗಿ ಎದುರಿಸಿದ್ದ ಭಾರತೀಯ ಆರಂಭಿಕರಾದ ರೋಹಿತ್ ಹಾಗೂ ಧವನ್ ಭಾರತಕ್ಕೆ ಸುಲಭ ಗೆಲುವು ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅದರಲ್ಲೂ ಕಳೆದೆರಡು ಪಂದ್ಯಗಳಲ್ಲಿ ಭರ್ಜರಿ ಅರ್ಧಶತಕ ಸಿಡಿಸಿರುವ ರೋಹಿತ್ ಶರ್ಮಾ ಬಗ್ಗೆ ಪಾಕ್ ಬೌಲರ್’ಗಳು ಎಚ್ಚರದಿಂದಿರಬೇಕು ಎಂದು ಅಜ್ಮಲ್ ಅಭಿಪ್ರಾಯಪಟ್ಟಿದ್ದಾರೆ.

ದುಬೈ[ಸೆ.23]: ಏಷ್ಯಾಕಪ್’ನಲ್ಲಿ ಸತತ ಮೂರು ಪಂದ್ಯಗಳನ್ನು ಗೆದ್ದು ಗೆಲುವಿನ ನಾಗಾಲೋಟ ಮುಂದುವರೆಸಿರುವ ಭಾರತ ಇಂದು ಸೂಪರ್ 4 ಹಂತದ ಎರಡನೇ ಪಂದ್ಯದಲ್ಲಿ ಇಂದು ಪಾಕಿಸ್ತಾನದ ಎದುರು ಸೆಣಸಲಿದೆ. ಉಭಯ ತಂಡಗಳ ಪಾಲಿಗೆ ಮಹತ್ವವೆನಿಸಿರುವ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಟೀಂ ಇಂಡಿಯಾದ ಹಂಗಾಮಿ ನಾಯಕ ರೋಹಿತ್ ಶರ್ಮಾ ಕುರಿತು ಎಚ್ಚರಿಕೆಯಿಂದಿರಬೇಕು ಎಂದು ಪಾಕ್ ಮಾಜಿ ಕ್ರಿಕೆಟಿಗ ಸಯೀದ್ ಅಜ್ಮಲ್ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನು ಓದಿ:ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಿ: ದಾದಾ

ಲೀಗ್ ಹಂತದಲ್ಲಿ ಪಾಕಿಸ್ತಾನ ಬೌಲರ್’ಗಳನ್ನು ಲೀಲಾಜಾಲವಾಗಿ ಎದುರಿಸಿದ್ದ ಭಾರತೀಯ ಆರಂಭಿಕರಾದ ರೋಹಿತ್ ಹಾಗೂ ಧವನ್ ಭಾರತಕ್ಕೆ ಸುಲಭ ಗೆಲುವು ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅದರಲ್ಲೂ ಕಳೆದೆರಡು ಪಂದ್ಯಗಳಲ್ಲಿ ಭರ್ಜರಿ ಅರ್ಧಶತಕ ಸಿಡಿಸಿರುವ ರೋಹಿತ್ ಶರ್ಮಾ ಬಗ್ಗೆ ಪಾಕ್ ಬೌಲರ್’ಗಳು ಎಚ್ಚರದಿಂದಿರಬೇಕು ಎಂದು ಅಜ್ಮಲ್ ಅಭಿಪ್ರಾಯಪಟ್ಟಿದ್ದಾರೆ.

ನಾಯಕನಾಗಿ ಹಾಗೂ ಆರಂಭಿಕನಾಗಿ ರೋಹಿತ್ ಯಶಸ್ವಿಯಾಗುತ್ತಿದ್ದಾರೆ. ಆರಂಭಿಕರು ಉತ್ತಮ ಆರಂಭ ಒದಗಿಸಿಕೊಡುತ್ತಿದ್ದಾರೆ. ಧೋನಿ ಕೂಡಾ ಬಾಂಗ್ಲಾದೇಶ ವಿರುದ್ಧ ಉತ್ತಮವಾಗಿ ಬ್ಯಾಟಿಂಗ್ ನಡೆಸುವ ಮೂಲಕ ಫಾರ್ಮ್’ಗೆ ಮರಳಿದ್ದಾರೆ. ಹೀಗಾಗಿ ಪಾಕಿಸ್ತಾನ ಎಚ್ಚರಿಕೆಯಿಂದ ಆಡಬೇಕಿದೆ ಎಂದು ಕಿವಿಮಾತು ಹೇಳಿದ್ದಾರೆ.