Asianet Suvarna News Asianet Suvarna News

ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯಲು ಸಜ್ಜಾದ ಟೀಂ ಇಂಡಿಯಾ

ಏಳನೇ ಬಾರಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಭಾರತ ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ. ಸೂಪರ್ 4 ಹಂತದ ಕೊನೆಯ ಪಂದ್ಯದಲ್ಲಿ ಆಫ್ಘನ್ ವಿರುದ್ಧ ಡ್ರಾ ಸಾಧಿಸಿದ್ದ ಭಾರತ, ಇದೀಗ ಸಧೃಢ ತಂಡದೊಂದಿಗೆ ಕಣಕ್ಕಿಳಿಯಲಿದೆ.

ದುಬೈ[ಸೆ.28]: ಬಹುನಿರೀಕ್ಷಿತ 14ನೇ ಆವೃತ್ತಿಯ ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಪ್ರಶಸ್ತಿಗಾಗಿ 6 ಬಾರಿಯ ಚಾಂಪಿಯನ್ ಭಾರತ ಹಾಗೂ ಕಳೆದ ಬಾರಿಯ ರನ್ನರ್ ಅಪ್ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಲಿವೆ.

ಏಳನೇ ಬಾರಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಭಾರತ ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ. ಸೂಪರ್ 4 ಹಂತದ ಕೊನೆಯ ಪಂದ್ಯದಲ್ಲಿ ಆಫ್ಘನ್ ವಿರುದ್ಧ ಡ್ರಾ ಸಾಧಿಸಿದ್ದ ಭಾರತ, ಇದೀಗ ಸಧೃಢ ತಂಡದೊಂದಿಗೆ ಕಣಕ್ಕಿಳಿಯಲಿದೆ. ಹೀಗಾಗಿ ಬಾಂಗ್ಲಾ ವಿರುದ್ಧ ಕಣಕ್ಕಿಳಿದಿದ್ದ ಐವರು ಮತ್ತೆ ಬೆಂಚ್ ಕಾಯಿಸುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ.

Video Top Stories