ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯ ಆರಂಭಗೊಂಡಿದೆ. ಈಗಾಗಲೇ ಟಾಸ್ ಗೆದ್ದಿರುವ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡದಲ್ಲಿನ ಬದಲಾವಣೆ ಇಲ್ಲಿದೆ.
ದುಬೈ(ಸೆ.23): ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಮೂಲಕ ರೋಹಿತ್ ಶರ್ಮಾ ಏಷ್ಯಾಕಪ್ ಟೂರ್ನಿಯಲ್ಲಿ ನಾಯಕನಾಗಿ ಈವರೆಗಿನ ಎಲ್ಲಾ ಟಾಸ್ ಸೋತಿದ್ದಾರೆ.
ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಗೆಲುವಿನ ತಂಡವನ್ನೇ ಕಣಕ್ಕಿಳಿಸಿದೆ. ಆದರೆ ಈ ಪಂದ್ಯದಲ್ಲೂ ಕನ್ನಡಿಗರಾದ ಕೆಎಲ್ ರಾಹುಲ್ ಹಾಗೂ ಮನೀಶ್ ಪಾಂಡೆ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.
ಪಾಕಿಸ್ತಾನ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಹ್ಯಾರಿಸ್ ಸೊಹೈಲ್ ಬದಲು ಶದಬ್ ಖಾನ್ ಸ್ಥಾನ ನೀಡಿದ್ದರೆ, ಉಸ್ಮಾನ್ ಶೆನ್ವಾರಿ ಬದಲು ಮೊಹಮ್ಮದ್ ಅಮೀರ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
