ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಿನ ಏಷ್ಯಾಕಪ್ ಸೂಪರ್ 4 ಹಂತದ ಅಂತಿಮ ಪಂದ್ಯ ಭಾರಿ ಕುತೂಹಲ ಕೆರಳಿಸಿದೆ. ಆರಂಭಿಕ ಹಂತದಲ್ಲಿ ಪಾಕಿಸ್ತಾನ ಮೇಲುಗೈ ಸಾಧಿಸಿದೆ. ಇಲ್ಲಿದೆ ಪಂದ್ಯದ ಅಪ್‌ಡೇಟ್ಸ್.

ಅಬು ದಾಬಿ(ಸೆ.26): ಏಷ್ಯಾಕಪ್ ಫೈನಲ್ ಪ್ರವೇಶಿಸಲು ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ತಂಡ ಹೋರಾಟ ನಡೆಸುತ್ತಿದೆ. ಗೆದ್ದ ತಂಡ ನೇರವಾಗಿ ಭಾರತ ವಿರುದ್ದ ಪ್ರಶಸ್ತಿಗಾಗಿ ಹೋರಾಟ ನಡೆಸಲಿದೆ. ಹೀಗಾಗಿ ಪಾಕಿಸ್ತಾನ ಹಾಗೂ ಬಾಂಗ್ಲಾ ಕಠಿಣ ಹೋರಾಟ ನೀಡುತ್ತಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ಬಾಂಗ್ಲಾದೇಶ ಆರಂಭದಲ್ಲೇ ಆಘಾತ ಅನುಭವಿಸಿದೆ. ಸೌಮ್ಯ ಸರ್ಕಾರ್, ಲಿಟ್ಟನ್ ದಾಸ್ ಹಾಗೂ ಮೊಮಿನಲ್ ಹಕ್ ಬಹುಬೇಗನೆ ಪೆವಿಲಿಯನ್ ಸೇರಿಕೊಂಡರು.

Scroll to load tweet…

3 ವಿಕೆಟ್ ಕಳೆದುಕೊಂಡಿರುವ ಬಾಂಗ್ಲಾದೇಶ ಸದ್ಯ 36 ರನ್ ಸಿಡಿಸಿದೆ. ಮಿಶ್ಫಿಕರ್ ರಹೀಮ್ ಹಾಗೂ ಮೊಹಮ್ಮದ್ ಮಿಥುನ್ ತಂಡಕ್ಕೆ ಆಸರೆಯಾಗಿದ್ದಾರೆ. ಇತ್ತ ಪಾಕ್ ಪರ ಜುನೈದ್ ಖಾನ್ 2 ವಿಕೆಟ್ ಕಬಳಿಸಿ ಮಿಂಚಿದ್ದಾರೆ.