ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯ ಆರಂಭದಿಂದಲೇ ಅಭಿಮಾನಿಗಳ ಕುತೂಹಲ ಇಮ್ಮಡಿಗೊಳಿಸಿತು. ಒಂದೆಡೆ ಎಂ.ಎಸ್ ಧೋನಿ ಮತ್ತೆ ನಾಯಕನಾದರೆ, ಮತ್ತೊಂದೆಡೆ ಆಫ್ಘಾನ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಇಲ್ಲಿದೆ ಪಂದ್ಯದ ಅಪ್‌ಡೇಟ್ಸ್

ದುಬೈ(ಸೆ.25): ಎಂ.ಎಸ್ ಧೋನಿ ನಾಯಕತ್ವದ ಟೀಂ ಇಂಡಿಯಾ, ಅಫ್ಘಾನಿಸ್ತಾನ ವಿರುದ್ಧದ ಏಷ್ಯಾಕಪ್ ಪಂದ್ಯದ ಗೆಲುವಿಗಾಗಿ ಹೋರಾಟ ನಡೆಸುತ್ತಿದೆ. ಗೆಲುವಿಗೆ 253 ರನ್ ಟಾರ್ಗೆಟ್ ಪಡೆದಿರುವ ಟೀಂ ಇಂಡಿಯಾ 6 ವಿಕೆಟ್ ಕಳೆದುಕೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆರಂಭದಲ್ಲಿ ಭಾರತ ತಂಡಕ್ಕೆ ಕೆಎಲ್ ರಾಹುಲ್ ಹಾಗೂ ಅಂಬಾಟಿ ರಾಯುಡು ಡೀಸೆಂಟ್ ಒಪನಿಂಗ್ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 110 ರನ್ ಜೊತೆಯಾಟ ನೀಡಿದರು. 

ಕೆಎಲ್ ರಾಹುಲ್ ಹಾಗೂ ಅಂಬಾಟಿ ರಾಯುಡು ಅರ್ಧಶತಕ ಸಿಡಿಸಿ ಮಿಂಚಿದರು. ರಾಯುಡು 57 ರನ್ ಸಿಡಿಸಿ ಔಟಾದರೆ, ರಾಹುಲ್ 60 ರನ್ ಸಿಡಿಸಿ ನಿರ್ಗಮಿಸಿದರು. ನಾಯಕನಾಗಿ ಮತ್ತೆ ಕಣಕ್ಕಿಳಿದ ಎಂ.ಎಸ್ ಧೋನಿ ಕೇವಲ 8 ರನ್ ಸಿಡಿಸಿ ನಿರಾಸೆ ಅನುಭವಿಸಿದರು.

ಸೂಪರ್ 4 ಹಂತದ ಅಂತಿಮ ಪಂದ್ಯದಲ್ಲಿ ಅವಕಾಶ ಪಡೆದ ಮನೀಶ್ ಪಾಂಡೆ ನಿರಾಸೆ ಮೂಡಿಸಿದರು. ಪಾಂಡೆ 8 ರನ್ ಸಿಡಿಸಿ ಪೆವಿಲಿಯನ್ ಸೇರಿಕೊಂಡರು. ಆದರೆ ದಿನೇಶ್ ಕಾರ್ತಿಕ್ ಹಾಗೂ ಕೇದಾರ್ ಜಾದವ್ ಜೊತೆಯಾಟ ತಂಡಕ್ಕೆ ಚೇತರಿಕೆ ನೀಡಿತು.

ಜಾದವ್ 19 ರನ್ ಸಿಡಿಸಿ ರನೌಟ್‌ಗೆ ಬಲಿಯಾದರು. ದಿನೇಶ್ ಕಾರ್ತಿಕ್ 44 ರನ್ ಸಿಡಿಸಿ ನಿರ್ಗಮಿಸಿದರು. ಸದ್ಯ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 207 ರನ್ ಸಿಡಿಸಿದೆ. ಗೆಲುವಿಗೆ ಇನ್ನು 46 ರನ್‌ಗಳ ಅವಶ್ಯಕತೆ ಇದೆ.

ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ಮೊಹಮ್ಮದ್ ಶೆಹಝಾದ್ ಭರ್ಜರಿ ಶತಕದ ನೆರವಿನಿಂದ 8 ವಿಕೆಟ್ ನಷ್ಟಕ್ಕೆ 252 ರನ್ ಸಿಡಿಸಿತು. ಮೊಹಮ್ಮದ್ ನಬಿ 62 ರನ್ ಕಾಣಿಕೆ ನೀಡಿದರು. ಭಾರತದ ಪರ ರವೀಂದ್ರ ಜಡೇಜಾ 3 ವಿಕೆಟ್ ಪಡೆದು ಮಿಂಚಿದರು.