ಭಾರತ  ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್ ಹೋರಾಟ ಆರಂಭದಲ್ಲೇ ಕುತೂಹಲ ಕೆರಳಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಇಳಿದಿರುವ ಪಾಕಿಸ್ತಾನ ತಂಡ ಬ್ಯಾಟಿಂಗ್ ಹಾಗೂ ಭಾರತದ ಬೌಲಿಂಗ್ ಪ್ರದರ್ಶನದ ಅಪ್‌ಡೇಟ್ಸ್ ಇಲ್ಲಿದೆ.

ದುಬೈ(ಸೆ.23): ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ಪಾಕಿಸ್ತಾನ ಆರಂಭಿಕರ ವಿಕೆಟ್ ಕಳೆದುಕೊಂಡಿದೆ. ಈ ಮೂಲಕ ಟೀಂ ಇಂಡಿಯಾ ಆರಂಭಿಕ ಮೇಲುಗೈ ಸಾಧಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಮಾಮ್ ಉಲ್ ಹಕ್ 10 ರನ್ ಸಿಡಿಸಿ ಔಟಾದರು. ಆದರೆ 1 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 31 ರನ್ ಸಿಡಿಸಿದ್ದ ಫಕರ್ ಜಮಾನ್, ಕುಲ್ದೀಪ್ ಮೋಡಿಗೆ ಬಲಿಯಾದರು. ಇನ್ನು 9ರನ್ ಸಿಡಿಸಿದ ಬಾಬರ್ ಅಜಮ್ ರನೌಟ್‌ಗೆ ಬಲಿಯಾದರು. ಸದ್ಯ ಪಾಕಿಸ್ತಾನ 58ರನ್‌ಗಳಿಗೆ ಪಾಕಿಸ್ತಾನ 3ನೇ ವಿಕೆಟ್ ಕಳೆದುಕೊಂಡಿತು.

Scroll to load tweet…

ಇಂದಿನ ಮಹತ್ವದ ಪಂದ್ಯಕ್ಕಾಗಿ ಪಾಕಿಸ್ತಾನ 2 ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಮೊಹಮ್ಮದ್ ಅಮೀರ್ ಹಾಗೂ ಶದಬ್ ಖಾನ್ ಸ್ಥಾನ ಪಡೆದಿದ್ದಾರೆ. ಆದರೆ ಟೀಂ ಇಂಡಿಯಾ ಯಾವುದೇ ಬದಲಾವಣೆ ಮಾಡಿಲ್ಲ.