Asianet Suvarna News Asianet Suvarna News

ಬದ್ಧವೈರಿ ಪಾಕಿಸ್ತಾನ ಮಣಿಸಿ ಪದಕ ಗೆದ್ದ ಭಾರತ ಹಾಕಿ

ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪುರುಷರ ಹಾಕಿ ತಂಡ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಪಾಕಿಸ್ತಾನ ವಿರುದ್ಧದ ನಡೆದ ಹೋರಾಟದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಇಲ್ಲಿದೆ ಇಂಡೋ-ಪಾಕ್ ಹಾಕಿ ಹೋರಾಟದ ಹೈಲೈಟ್ಸ್.

Asian games 2018 hockey India beat pakistan to clinch bronze medal
Author
Bengaluru, First Published Sep 1, 2018, 5:36 PM IST

ಜಕರ್ತಾ(ಸೆ.01): ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಹಾಕಿಯಲ್ಲಿ ಭಾರತ, ಬದ್ಧವೈರಿ ಪಾಕಿಸ್ತಾನ ತಂಡವನ್ನ ಮಣಿಸಿ ಪದಕ ಗೆದ್ದುಕೊಂಡಿದೆ. ಕಂಚಿನ ಪದಕ್ಕಾಗಿ ನಡೆದ ಹೋರಾಟದಲ್ಲಿ ಭಾರತ, ಪಾಕಿಸ್ತಾನ ತಂಡವನ್ನ 2-1 ಗೋಲುಗಳ ಅಂತರದಲ್ಲಿ ಮಣಿಸಿತು.

18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲೋ ನಿರೀಕ್ಷೆ ಹುಟ್ಟಿಸಿದ್ದ ಭಾರತ, ಕೊನೆಗೆ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಲೀಗ್ ಹಂತದಲ್ಲಿ ಇಂಡೋನೇಶಿಯಾ 17-0, ಹಾಂಕಾಂಗ್ 26-0, ಜಪಾನ್ 8-0, ಕೊರಿಯಾ 5-3, ಶ್ರೀಲಂಕಾ 20-0 ಅಂತರದಲ್ಲಿ ಮಣಿಸಿತ್ತು.

ಮಲೇಷಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತ 6-7 ಅಂತರದಲ್ಲಿ ಸೋಲು ಅನುಭವಿಸಿತು. ಹೀಗಾಗಿ ಚಿನ್ನದ ಪದಕ ಕೈತಪ್ಪಿತು. ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಜಪಾನ್ ವಿರುದ್ದ ಸೋಲು ಅನುಭವಿಸಿತ್ತು. ಹೀಗಾಗಿ ಕಂಚಿನ ಪದಕ್ಕಗಾಗಿ ಭಾರತ ಹಾಗೂ ಪಾಕಿಸ್ತಾನ ಹೋರಾಟ ನಡೆಸಿತ್ತು. 

2014ರ ಇಂಚಿಯಾನ್ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದ ಭಾರತ, ಇದೀಗ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದೆ. ಆದರೆ ಪಾಕಿಸ್ತಾನ ಮಣಿಸಿ ಕಂಚಿನ ಪದಕ ಗೆದ್ದಿರುವ ಭಾರತದ ಸಾಧನೆ ಚಿನ್ನಕ್ಕೆ ಸಮವಾಗಿದೆ  ಎಂದು ಹಾಕಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.

Follow Us:
Download App:
  • android
  • ios