ಕಳೆದ ಕೆಲ ವರ್ಷಗಳ ಹಿಂದಷ್ಟೇ ಟೆಸ್ಟ್ ರಂಗದಲ್ಲಿ ಅತ್ಯುತ್ತಮ ತಂಡವೆಂಬ ಹೆಗ್ಗಳಿಕೆ ಪಡೆದಿದ್ದ ಆಸ್ಟ್ರೇಲಿಯಾ ತಂಡ, ಈಗ ತನ್ನ ಸಾಮರ್ಥ್ಯಕ್ಕೆ ತಕ್ಕ ಆಟ ಆಡುತ್ತಿಲ್ಲ.- ಆ್ಯಂಡಂ ಗಿಲ್‌ಕ್ರಿಸ್ಟ್

ಸಿಡ್ನಿ(ನ.10): ಮುಂದಿನ ವರ್ಷ ಫೆಬ್ರವರಿಯಲ್ಲಿ ಭಾರತ ಪ್ರವಾಸ ಕೈಗೊಳ್ಳಲಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡ, ಭಾರತದ ನೆಲದಲ್ಲಿ ಯಶಸ್ವಿಯಾಗಲು ಸಾಕಷ್ಟು ಕಠಿಣ ಅಭ್ಯಾಸ ನಡೆಸಬೇಕಿದೆ ಎಂದು ಕಾಂಗರೂ ಪಡೆಯ ಮಾಜಿ ನಾಯಕ ಆ್ಯಂಡಂ ಗಿಲ್‌ಕ್ರಿಸ್ಟ್ ಕಿವಿಮಾತು ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದ ಕೆಲ ವರ್ಷಗಳ ಹಿಂದಷ್ಟೇ ಟೆಸ್ಟ್ ರಂಗದಲ್ಲಿ ಅತ್ಯುತ್ತಮ ತಂಡವೆಂಬ ಹೆಗ್ಗಳಿಕೆ ಪಡೆದಿದ್ದ ಆಸ್ಟ್ರೇಲಿಯಾ ತಂಡ, ಈಗ ತನ್ನ ಸಾಮರ್ಥ್ಯಕ್ಕೆ ತಕ್ಕ ಆಟ ಆಡುತ್ತಿಲ್ಲ. ಇತ್ತೀಚೆಗೆ, ತನ್ನದೇ ತವರಿನಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧದ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದೆ. ಈ ಹಿನ್ನೆಲೆಯಲ್ಲಿ, ಭಾರತ ವಿರುದ್ಧ ಯಶಸ್ಸು ಗಳಿಸಬೇಕಾದಲ್ಲಿ ಅದು ಈಗಿನಿಂದಲೇ ಕಠಿಣ ಪರಿಶ್ರಮ ಪಡಬೇಕೆಂದು ಗಿಲ್‌ಕ್ರಿಸ್ಟ್ ಹೇಳಿದ್ದಾರೆ.