ನಿಷೇಧದ ಶಿಕ್ಷೆಯಿಂದ ಕಳೆದ ಐಪಿಎಲ್ ಆವೃತ್ತಿಯಿಂದ ಹೊರಗುಳಿದಿದ್ದ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಇದೀಗ ತಂಡ ಸೇರಿಕೊಂಡಿದ್ದಾರೆ. ಕಳೆದೊಂದು ವರ್ಷದಿಂದ ಕ್ರಿಕೆಟ್‌ನಿಂದ ದೂರವಿದ್ದ ಸ್ಮಿತ್, ವಾರ್ನರ್ ಇದೀಗ ಅಬ್ಬರಿಸಲು ರೆಡಿಯಾಗಿದ್ದಾರೆ.

ಹೈದರಾಬಾದ್(ಮಾ.17): ಐಪಿಎಲ್ ಟೂರ್ನಿ ಆರಂಭಕ್ಕೆ ಕೆಲ ದಿನ ಮಾತ್ರ ಬಾಕಿ. 8 ತಂಡಗಳು ಭರ್ಜರಿ ಅಭ್ಯಾಸ ಆರಂಭಿಸಿದೆ. ಇತ್ತ ಟೀಂ ಇಂಡಿಯಾ ಕ್ರಿಕೆಟಿಗರು ಕೂಡ ಐಪಿಎಲ್ ತಂಡಗಳನ್ನು ಸೇರಿಕೊಂಡಿದ್ದಾರೆ. ನಿಷೇಧ ಶಿಕ್ಷೆಯಿಂದ ಕಳೆದ ಐಪಿಎಲ್ ಟೂರ್ನಿಯಿಂದ ಹೊರಗುಳಿದ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ತಂಡ ಸೇರಿಕೊಂಡಿದ್ದಾರೆ.

ಇದನ್ನೂ ಓದಿ: ಅಭಿಮಾನಿಗಳಿಗಾಗಿ RCB ಆ್ಯಪ್‌!

ಸನ್ ರೈಸರ್ಸ್ ಹೈದರಾಬಾದ್ ತಂಡ ಡೇವಿಡ್ ವಾರ್ನರ್‌ಗೆ ಶಾಲು ಹೊದಿಸಿ, ತಿಲಕವಿಟ್ಟು ಆತ್ಮೀಯವಾಗಿ ಸ್ವಾಗತಿಸಿತು. ಇನ್ನು ರಾಜಸ್ಥಾನ ರಾಯಲ್ಸ್ ತಂಡದ ಕೀ ಪ್ಲೇಯರ್ ಸ್ಟೀವ್ ಸ್ಮಿತ್‌ಗೆ ರಾಜಸ್ಥಾನ ರುಮಾಲು ತೊಡಿಸಿ ಬರಮಾಡಿಕೊಳ್ಳಲಾಯಿತು.

Scroll to load tweet…

Scroll to load tweet…

ಇದನ್ನೂ ಓದಿ: ಇಲ್ಲಿದೆ ಐಪಿಎಲ್ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ ದಿನಾಂಕ !

ವಿಶ್ವಕಪ್ ಟೂರ್ನಿಗೂ ಮುನ್ನ ನಡೆಯುತ್ತಿರುವ ಐಪಿಎಲ್ ಟೂರ್ನಿ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಪಾಲಿಗೆ ಪ್ರಮುಖವಾಗಿದೆ. ಕಾರಣ ಕಳೆದೊಂದು ವರ್ಷದಿಂದ ಕ್ರಿಕೆಟ್‌ನಿಂದ ದೂರ ಉಳಿದಿರುವ ಸ್ಮಿತ್ ಹಾಗೂ ವಾರ್ನರ್ ಐಪಿಎಲ್ ಪ್ರದರ್ಶನವೇ ವಿಶ್ವಕಪ್ ಟೂರ್ನಿ ಆಯ್ಕೆಗೆ ನೆರವಾಗಲಿದೆ.