ಇತ್ತೀಚೆಗಷ್ಟೇ ಆಸ್ಟ್ರೇಲಿಯಾ ‘ಎ’ ತಂಡ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹಿಂದೆ ಸರಿದಿತ್ತು.
ಸಿಡ್ನಿ(ಜು.25): ವೇತನ ಒಪ್ಪಂದ ಕುರಿತು ಕ್ರಿಕೆಟ್ ಆಡಳಿತ ಸಮಿತಿ ಮತ್ತು ಆಟಗಾರರ ನಡುವಿನ ತಿಕ್ಕಾಟ ಮುಂದುವರಿದಿದ್ದು, ಬಾಂಗ್ಲಾದೇಶ ಪ್ರವಾಸವನ್ನೂ ಬಹಿಷ್ಕರಿಸಲು ಆಸ್ಟ್ರೇಲಿಯಾ ಆಟಗಾರರು ಒಮ್ಮತದ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಧ್ಯಮಗಳು ವರದಿ ಮಾಡಿವೆ.
ಕಳೆದ ವಾರ ಕ್ರಿಕೆಟ್ ಆಸ್ಟ್ರೇಲಿಯಾ ಜತೆ ನಡೆದ ಸಂಧಾನ ಸಭೆ ಮುರಿದು ಬಿದ್ದ ಬಳಿಕ, ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರರ ಒಕ್ಕೂಟದ ಮುಖ್ಯಸ್ಥರೊಂದಿಗೆ ನಡೆದ ಸಭೆಯಲ್ಲಿ ನಾಯಕ ಸ್ಟೀವನ್ ಸ್ಮಿತ್ ಹಾಗೂ ಉಪನಾಯಕ ಡೇವಿಡ್ ವಾರ್ನರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಾಂಗ್ಲಾ ಪ್ರವಾಸದ ವೇಳೆ ವಿಶೇಷ ಒಪ್ಪಂದ ಮಾಡಿಕೊಳ್ಳುವುದು ಸೇರಿದಂತೆ ಹಲವು ಆಯ್ಕೆಗಳ ಕುರಿತು ಚರ್ಚೆ ನಡೆಸಿದ ಆಟಗಾರರು, ಈ ಹಿಂದೆ ಕೈಗೊಂಡ ನಿರ್ಣಯಕ್ಕೆ ಬದ್ಧರಾಗಲು ತೀರ್ಮಾನಿಸಿದರು ಎಂದು ತಿಳಿದು ಬಂದಿದೆ. ಆ.10ರಿಂದ ಆರಂಭಗೊಳ್ಳಲಿರುವ ತರಬೇತಿ ಶಿಬಿರದಲ್ಲಿ ಮಾತ್ರ ಭಾಗವಹಿಸಲು ಆಟಗಾರರು ಸಮ್ಮತಿ ಸೂಚಿಸಿದ್ದು, ಅಷ್ಟರಲ್ಲಿ ವೇತನ ಒಪ್ಪಂದ ಸಮಸ್ಯೆ ಪೂರ್ಣಗೊಳ್ಳಿಸುವಂತೆ ಕ್ರಿಕೆಟ್ ಆಸ್ಟ್ರೇಲಿಯಾಗೆ ಗಡುವು ನೀಡಿದ್ದಾರೆ ಎನ್ನಲಾಗಿದೆ.
ಇತ್ತೀಚೆಗಷ್ಟೇ ಆಸ್ಟ್ರೇಲಿಯಾ ‘ಎ’ ತಂಡ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹಿಂದೆ ಸರಿದಿತ್ತು.
