ಜಕಾರ್ತ(ಜ.22): ಭಾರತದ ತಾರಾ ಶಟ್ಲರ್‌ಗಳಾದ ಪಿ.ವಿ.ಸಿಂಧು, ಸೈನಾ ನೆಹ್ವಾಲ್‌ ಮತ್ತು ಕಿದಂಬಿ ಶ್ರೀಕಾಂತ್‌, ಇಲ್ಲಿ ಮಂಗಳವಾರದಿಂದ ಆರಂಭವಾಗಲಿರುವ ಇಂಡೋನೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ. 

ಕಳೆದ ವಾರ ನಡೆದಿದ್ದ ಮಲೇಷ್ಯಾ ಮಾಸ್ಟರ್ಸ್‌ ಟೂರ್ನಿಯಿಂದ ಹಿಂದೆ ಸರಿದಿದ್ದ 2ನೇ ಶ್ರೇಯಾಂಕಿತೆ ಸಿಂಧು, 2019ರಲ್ಲಿ ಮೊದಲ ಅಂ.ರಾ. ಟೂರ್ನಿಯನ್ನು ಆಡಲಿದ್ದಾರೆ. ಮಂಗಳವಾರ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿದ್ದು, ಬುಧವಾರದಿಂದ ಪ್ರಧಾನ ಸುತ್ತು ಆರಂಭಗೊಳ್ಳಲಿದೆ. 

ಸಿಂಧು, ಮೊದಲ ಸುತ್ತಿನಲ್ಲಿ ಮಾಜಿ ಒಲಿಂಪಿಕ್‌ ಚಾಂಪಿಯನ್‌ ಚೀನಾದ ಲೀ ಕ್ಸುಯಿರಿಯನ್ನು ಎದುರಿಸಲಿದ್ದಾರೆ. ಸೈನಾ ಹಾಗೂ ಶ್ರೀಕಾಂತ್‌ಗೆ ಮೊದಲ ಸುತ್ತಿನಲ್ಲಿ ಸುಲಭ ಸವಾಲು ಎದುರಾಗಲಿದೆ.