ಶಕೀಬ್, ಮಾರ್ಚ್’ನಲ್ಲಿ ಶ್ರೀಲಂಕಾ ವಿರುದ್ಧ ಟಿ20 ಪಂದ್ಯದಲ್ಲಿ ನಿಯಮ ಉಲ್ಲಂಘಿಸಿದ್ದರು. ವಿಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದ 14ನೇ ಓವರ್‌ನಲ್ಲಿ ವೈಡ್ ನೀಡದಿದ್ದಕ್ಕೆ ಶಕೀಬ್ ಅಂಪೈರ್‌ ಅವರ ಮೇಲೆ ಗದರಿದ್ದರು. ಪಂದ್ಯದ ಮುಕ್ತಾಯದ ಬಳಿಕ ಶಕೀಬ್, ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು.

ಢಾಕಾ[ಡಿ.20]: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದ ವೇಳೆ ಫೀಲ್ಡ್ ಅಂಪೈರ್‌ಗೆ ಗದರಿದ ಬಾಂಗ್ಲಾದೇಶ ನಾಯಕ ಶಕೀಬ್ ಅಲ್ ಹಸನ್‌ಗೆ ಅಂತಾರಾಷ್ಟ್ರೀಯ ಕ್ರಿಕೆಟ್
ಸಮಿತಿ(ಐಸಿಸಿ) ಪಂದ್ಯದ ಸಂಭಾವನೆಯ ಶೇ.15ರಷ್ಟು ದಂಡ ವಿಧಿಸಿದೆ. ಅಲ್ಲದೆ ಶಕೀಬ್ ಒಂದು ಡಿಮೆರಿಟ್ ಅಂಕ ಪಡೆದಿದ್ದು, ಇದು ಅವರ 2ನೇ ಡಿಮೆರಿಟ್ ಅಂಕವಾಗಿದೆ. 

ಶಕೀಬ್, ಮಾರ್ಚ್’ನಲ್ಲಿ ಶ್ರೀಲಂಕಾ ವಿರುದ್ಧ ಟಿ20 ಪಂದ್ಯದಲ್ಲಿ ನಿಯಮ ಉಲ್ಲಂಘಿಸಿದ್ದರು. ವಿಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದ 14ನೇ ಓವರ್‌ನಲ್ಲಿ ವೈಡ್ ನೀಡದಿದ್ದಕ್ಕೆ ಶಕೀಬ್
ಅಂಪೈರ್‌ರನ್ನು ಗದರಿದ್ದರು. ಪಂದ್ಯದ ಮುಕ್ತಾಯದ ಬಳಿಕ ಶಕೀಬ್, ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು.

ಈ ಪಂದ್ಯದಲ್ಲಿ ಶಕೀಬ್ ಅಲ್ ಹಸನ್ 43 ಎಸೆತಗಳಲ್ಲಿ 61 ರನ್ ಸಿಡಿಸಿದರೂ ತಂಡವನ್ನು ಹೀನಾಯ ಸೋಲಿನಿಂದ ತಪ್ಪಿಸಲು ಸಾಧ್ಯವಾಗಲಿಲ್ಲ. ಈಗಾಗಲೇ ಬಾಂಗ್ಲಾದೇಶ ಟೆಸ್ಟ್ ಹಾಗೂ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ