ವಿಕೇಟ್ ಕೀಪರ್, ಬ್ಯಾಟ್ಸ್'ಮೆನ್ ಆಗಿರುವ ದಿನೇಶ್ ಕಾರ್ತಿಕ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಇನ್ನುಳಿದಂತೆ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಮುಂಬೈ(ಅ.14): ಅಕ್ಟೋಬರ್ 22 ರಂದು ಆರಂಭವಾಗುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದ್ದು, ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆ ಮಾಡಿಕೊಂಡಿದ್ದ ಕನ್ನಡಿಗ ಬ್ಯಾಟ್ಸ್'ಮೆನ್ ಕೆ.ಎಲ್. ರಾಹುಲ್ ಅವರನ್ನು ಕೈಬಿಡಲಾಗಿದೆ. ಮತ್ತೊಬ್ವ ಕನ್ನಡಿಗ ಮನೀಶ್ ಪಾಂಡೆಯನ್ನು ಉಳಿಸಿಕೊಳ್ಳಲಾಗಿದೆ.

ಆಸೀಸ್ ಸರಣಿಯಲ್ಲಿದ್ದ ಮೊಹಮದ್ ಶಮಿ, ಉಮೇಶ್ ಯಾದವ್ ಅವರನ್ನು ಕೈಬಿಡಲಾಗಿದೆ. ಸ್ಟಾರ್ ಆಟಗಾರರದ ಆಲ್'ರೌಂಡರ್ ರವೀಂದ್ರ ಜಡೇಜಾ ಹಾಗೂ ಆರ್. ಅಶ್ವಿನ್ ಅವರನ್ನು ತಂಡಕ್ಕೆ ಪರಿಗಣಿಸಿಲ್ಲ. ಮುಂಬೈನ ಮಧ್ಯಮ ವೇಗದ ಬೌಲರ್ ಶಾರ್ದುಲ್ ಠಾಕೂರ್ ಹಾಗೂ ವಿಕೇಟ್ ಕೀಪರ್, ಬ್ಯಾಟ್ಸ್'ಮೆನ್ ಆಗಿರುವ ದಿನೇಶ್ ಕಾರ್ತಿಕ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಇನ್ನುಳಿದಂತೆ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ(ಉಪ ನಾಯಕ), ಶಿಖರ್ ಧವನ್, ಅಜಿಂಕ್ಯ ರಹಾನೆ, ಮನೀಶ್ ಪಾಂಡೆ, ಕೇದಾರ್ ಜಾಧವ್, ದಿನೇಶ್ ಕಾರ್ತಿಕ್, ಎಂ.ಎಸ್. ಧೋನಿ(ವಿಕೇಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸ'ರ್ ಪಟೇಲ್, ಕುಲ್ದೀಪ್ ಯಾದವ್, ಯಜುವೇಂದ್ರ ಚಾಹಲ್, ಜಸ್'ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಶಾರ್ದೂಲ್ ಠಾಕೂರ್