ಮುಂಬೈ(ಮಾ.16): ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾಗೋ ಮೊದಲು ಹಂತದ ಐಪಿಎಲ್ ಟೂರ್ನಿ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ, ಇದೀಗ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ ಮಾಡಲು ಅಂತಿಮ ಕಸರತ್ತು ನಡೆಸುತ್ತಿದೆ. ಮಾ.18ಕ್ಕೆ 12ನೇ ಆವೃತ್ತಿ ಐಪಿಎಲ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಐಪಿಎಲ್ 2019ರ ವೇಳಾಪಟ್ಟಿ ಪ್ರಕಟ-ಉದ್ಘಾಟನಾ ಪಂದ್ಯದಲ್ಲಿ RCB -CSK ಫೈಟ್!

ಮಾರ್ಚ್ 23 ರಿಂದ 2019ರ ಐಪಿಎಲ್ ಟೂರ್ನಿ ಆರಂಭಗೊಳ್ಳಲಿದೆ. ಸದ್ಯ ಆರಂಭಿಕ 19 ಪಂದ್ಯಗಳ ಐಪಿಎಲ್ ವೇಳಾಪಟ್ಟಿ ಪ್ರಕಟಗೊಂಡಿದೆ. ಎಪ್ರಿಲ್ 5ರ ವರೆಗಿನ ವೇಳಾಪಟ್ಟಿಯನ್ನ ಬಿಸಿಸಿಐ ಅನೌನ್ಸ್ ಮಾಡಿದೆ. ಇನ್ನುಳಿದ ಪಂದ್ಯದ ವೇಳಾಪಟ್ಟಿ ಬಿಸಿಸಿಐ ಬಿಡುಗಡೆ ಮಾಡಲಿದೆ. 

ಇದನ್ನೂ ಓದಿ: ರಾಜಕೀಯ ಜಾಹೀರಾತು: ಬಿಸಿಸಿಐಗೆ ಸ್ಟಾರ್ ಪತ್ರ

ಏ.11ರಿಂದ ಲೋಕಸಭಾ ಚುನಾವಣೆ ಆರಂಭವಾಗಿ ಮೇ. 19ರ ವರೆಗೆ ನಡೆಯಲಿದೆ. ಈ ಬಾರಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಹಲವು ರಾಜ್ಯಗಳಲ್ಲಿ ಒಂದು ಹಂತ ಮತ್ತು ಇನ್ನೂ ಹಲವು ರಾಜ್ಯಗಳಲ್ಲಿ ಎರಡು ಹಂತಗಳ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ ಮತದಾನ ಏ.18(14 ಲೋಕಸಭೆ ಸ್ಥಾನ)ರಂದು ನಡೆಯಲಿದೆ. ಎರಡನೇ ಹಂತದ ಮತದಾನ ಏ.23(14 ಲೋಕಸಭೆ ಸ್ಥಾನ)ರಂದು ನಡೆಯಲಿದೆ. ಈ ದಿನಾಂಕಗಳನ್ನು ಹೊರತು ಪಡಿಸಿ ಉಳಿದ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆಯಾಗಲಿದೆ.

ಸದ್ಯ ಬಿಡುಗಡೆಯಾಗಿರುವ ಐಪಿಎಲ್ ವೇಳಾಪಟ್ಟಿ ಪ್ರಕಾರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೋರಾಟ ನಡೆಸಲಿದೆ.