ಒಂದೊಮ್ಮೆ ಪಂದ್ಯಾವಳಿಯನ್ನು ಸ್ಥಳಾಂತರಗೊಳಿಸಲು ನಿರ್ಧರಿಸಿದರೆ, ದಕ್ಷಿಣ ಆಫ್ರಿಕಾ ಬಿಸಿಸಿಐನ ಮೊದಲ ಆಯ್ಕೆಯಾಗಿರಲಿದೆ ಎನ್ನಲಾಗಿದೆ. ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸುವುದನ್ನು ಬಿಸಿಸಿಐ ಕಾಯುತ್ತಿದ್ದು, ಬಳಿಕ ಸ್ಥಳಾಂತರದ ಬಗ್ಗೆ ನಿರ್ಧರಿಸಲಿದೆ ಎನ್ನಲಾಗಿದೆ. 

ನವದೆಹಲಿ[ಸೆ.12]: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 2019ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಟೂರ್ನಿ ಭಾಗಶಃ ಇಲ್ಲವೇ ಸಂಪೂರ್ಣವಾಗಿ ಭಾರತದಿಂದ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ.
ಒಂದೊಮ್ಮೆ ಪಂದ್ಯಾವಳಿಯನ್ನು ಸ್ಥಳಾಂತರಗೊಳಿಸಲು ನಿರ್ಧರಿಸಿದರೆ, ದಕ್ಷಿಣ ಆಫ್ರಿಕಾ ಬಿಸಿಸಿಐನ ಮೊದಲ ಆಯ್ಕೆಯಾಗಿರಲಿದೆ ಎನ್ನಲಾಗಿದೆ. ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸುವುದನ್ನು ಬಿಸಿಸಿಐ ಕಾಯುತ್ತಿದ್ದು, ಬಳಿಕ ಸ್ಥಳಾಂತರದ ಬಗ್ಗೆ ನಿರ್ಧರಿಸಲಿದೆ ಎನ್ನಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

2009 ಹಾಗೂ 2014ರಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಐಪಿಎಲ್ ಕ್ರಮವಾಗಿ ದ.ಆಫ್ರಿಕಾ ಹಾಗೂ ಯುಎಇನಲ್ಲಿ ನಡೆದಿತ್ತು. ಮುಂದಿನ ವರ್ಷ ಐಪಿಎಲ್ ಆಯೋಜನೆಗೆ ಇಂಗ್ಲೆಂಡ್ ಸಹ ಆಸಕ್ತಿ ತೋರುವ ಸಾಧ್ಯತೆ ಇದೆ ಎನ್ನಲಾಗಿದೆ.