ದೆಹಲಿ(ಮಾ.14): ರಣಜಿ ತಂಡಕ್ಕೆ ಆಯ್ಕೆ ಮಾಡಲು 80 ಲಕ್ಷ ರೂಪಾಯಿ ಪಡೆದು ವಂಚಿಸಲಾಗಿದೆ ಅನ್ನೋ ಯುವ ಕ್ರಿಕೆಟಿಗರ ಆರೋಪವನ್ನು ಬಿಸಿಸಿಐ ಗಂಭೀರವಾಗಿ ಪರಿಗಣಿಸಿದೆ. ದೆಹಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಬಿಸಿಸಿಐ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ.

ಇದನ್ನೂ ಓದಿ: ವಿಶ್ವಕಪ್‌ ಆತಿಥ್ಯ ಹಿಂಪಡೆದರೆ ನಷ್ಟವಿಲ್ಲ: ಬಿಸಿಸಿಐ

ಯುವ ಕ್ರಿಕೆಟಿಗರಾದ ಕಾನಿಶ್ಕ್ ಗೌರ್, ಕಿಶನ್ ಅತ್ತಾರಿ ಹಾಗೂ ಶಿವಂ ಶರ್ಮಾ 3 ರಣಜಿ ತಂಡಕ್ಕೆ ಆಯ್ಕೆಯಾಗಲು ಬರೋಬ್ಬರಿ 80 ಲಕ್ಷ ರೂಪಾಯಿ ನೀಡಲಾಗಿದೆ ಅನ್ನೋ ಆರೋಪ ಕೇಳಿಬಂದಿತ್ತು. ನಾಗಾಲ್ಯಾಂಡ್, ಮಣಿಪುರ ಹಾಗೂ ಜಾರ್ಖಂಡ್ ತಂಡಕ್ಕೆ ಆಯ್ಕೆ ಮಾಡುವುದಾಗಿ ಹೇಳಿ ಕ್ರಿಕೆಟ್ ಕೋಚ್ 80 ಲಕ್ಷ ರೂಪಾಯಿ ಪಡೆದಿದ್ದಾರೆ. ಬಳಿಕ ನಕಲಿ ದಾಖಲೆ ನೀಡಿ ವಂಚಿಸಿದ್ದಾರೆ ಎಂದು ಯುವಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಸಿಸಿಐಗೆ ಐಸಿಸಿಯಿಂದ 150 ಕೋಟಿ ರುಪಾಯಿ ತೆರಿಗೆ ಹೊರೆ!

ಬಿಸಿಸಿಐ ಭ್ರಷ್ಟಾಚಾರಾ ನಿಗ್ರಹ ದಳ ಈ ಕುರಿತು ತನಿಖೆ ನಡೆಸುತ್ತಿದೆ. ಇದೇ ವೇಳೆ ಬಿಸಿಸಿಐ ದೂರು ದಾಖಲಿಸಿದೆ. ನಾಗಾಲ್ಯಾಂಡ್ ರಣಜಿ ತಂಡ ಅಧಿಕಾರಿಗಳು ಹಾಗೂ ಕೆಲ ಕ್ರಿಕೆಟ್ ಸಂಸ್ಥೆಗಳ ಅಧಿಕಾರಿಗಳು ಈ ಪ್ರಕರಣದಲ್ಲಿ ಪಾಲ್ಗೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.