ಮುಂಬೈ(ಡಿ.11): ಟೀಂ ಇಂಡಿಯಾ ಮಹಿಳಾ ತಂಡದ ಮುಖ್ಯ ಕೋಚ್ ಆಯ್ಕೆ ಇದೀಗ ಬಿಸಿಸಿಐಗ ಕಗ್ಗಾಂಟಾಗಿದೆ. ಹಂಗಾಮಿ ಕೋಚ್ ರಮೇಶ್ ಪೊವಾರ್ ಹಾಗೂ ಹಿರಿಯ ಆಟಗಾರ್ತಿ ಮಿಥಾಲಿ ರಾಜ್ ಜಟಾಪಟಿಯಿಂದ ಇದೀಗ ನೂತನ ಕೋಚ್ ಆಯ್ಕೆಗೆ ಬಿಸಿಸಿಐ ಮುಂದಾಗಿದೆ.

ಕೋಚ್ ಆಯ್ಕೆಗೆ ಮಾಜಿ ನಾಯಕ ಕಪಿಲ್ ದೇವ್ ನೇತೃತ್ವದ ಮೂವರು ಸದಸ್ಯರ ಸಮಿತಿ ನೇಮಕ ಮಾಡಲಾಗಿದೆ. ಈ ಸಮಿತಿಯಲ್ಲಿ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್, ಮಹಿಳಾ ಮಾಜಿ ಆಟಗಾರ್ತಿ ಶಾಂತಾ ರಂಗಸ್ವಾಮಿ ನೇತೃತ್ವದ ಮೂವರ ಸಮಿತಿ ನೇಮಿಸಲಾಗಿದೆ.

ಸದ್ಯ ಭಾರತ ಮಹಿಳಾ ತಂಡದ ಮುಖ್ಯ ಕೋಚ್ ಹುದ್ದೆಗೆ ಸೌತ್ಆಫ್ರಿಕಾ ಮಾಜಿ ಕ್ರಿಕೆಟಿಗ ಹರ್ಶಲ್ ಗಿಬ್ಸ್, ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಓವೈ ಶಾ, ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಮನೋಜ್ ಪ್ರಭಾಕರ್ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಕಪಿಲ್ ದೇವ್ ನೇತೃತ್ವದ ನೂತನ ಕಮಿಟಿ ಸಂದರ್ಶನದ ಮೂಲಕ ಕೋಚ್ ಆಯ್ಕೆ ಮಾಡಲಿದೆ.