ಬಿಸಿಸಿಐ ಮುಂದಿನ ಅಧ್ಯಕ್ಷರಾಗ್ತಾರ ಸೌರವ್ ಗಂಗೂಲಿ?

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 11, Aug 2018, 6:57 PM IST
Bcci president race Sourav ganguly is the front runner
Highlights

ಲೋಧ ಶಿಫಾರಸು ಕುರಿತು ಇತ್ತೀಚೆಗೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ಬಿಸಿಸಿಐ ಹಂಗಾಮಿ ಅಧ್ಯಕ್ಷ ಹಾಗೂ ಇತರ ಪದಾಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ಶೀಘ್ರದಲ್ಲೇ ಚುನಾವಣೆ ನಡೆದರಿ ಬಿಸಿಸಿಐ ಅಧ್ಯಕ್ಷರಾಗಿ ಮಾಜಿ ನಾಯಕ ಸೌರವ್ ಗಂಗೂಲಿ ಆಯ್ಕೆಯಾಗ್ತಾರ? ಇಲ್ಲಿದೆ ವಿವರ.

ಮುಂಬೈ(ಆ.11): ಕಳೆದ ಕೆಲ ವರ್ಷಗಳಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರು ಹಲವು ಕ್ಷೇತ್ರಗಳಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡಿದ್ದಾರೆ. ರಾಹುಲ್ ದ್ರಾವಿಡ್ ಕೋಚ್ ಆಗಿದ್ದರೆ, ಸಚಿನ್ ತೆಂಡೂಲ್ಕರ್ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ವಿರೇಂದ್ರ ಸೆಹ್ವಾಗ್, ವಿವಿಎಸ್ ಲಕ್ಷ್ಮಣ್ ವೀಕ್ಷಕ ವಿವರಣೆಗಾಗರಾಗಿ ತೊಡಗಿಸಿಕೊಂಡಿದ್ದಾರೆ.

ಮಾಜಿ ನಾಯಕ ಸೌರವ್ ಗಂಗೂಲಿ ಬಂಗಳಾ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ದಕ್ಷ ಆಡಳಿತ ನೀಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೋಲ್ಕತ್ತಾ ಪ್ರಿನ್ಸ್ ಗಂಗೂಲಿ ಮುಂದಿನ ಬಿಸಿಸಿಐ ಅಧ್ಯಕ್ಷ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದೆ.

ಸುಪ್ರೀಂ ಕೋರ್ಟ್ ಲೋಧ ಶಿಫಾರಸುಗಳನ್ನ ಸಡಿಲಗೊಳಿದ ಬೆನ್ನಲ್ಲೇ, ಇದೀಗ ಸೌರವ್ ಗಂಗೂಲಿ ಮುಂದಿನ ಬಿಸಿಸಿಐ ಅಧ್ಯಕ್ಷ ಸ್ಥಾನ ಅಲಂಕರಿಸಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಬಹಿರಂಗ ಪಡಿಸಿದೆ.

ಬಂಗಾಳ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ಅತ್ಯುತ್ತಮ ಆಡಳಿತ ನೀಡಿರುವ ಗಂಗೂಲಿ, ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಅನ್ನೋ ಅಭಿಪ್ರಾಯವಿದೆ. ಸದ್ಯ ಹಂಗಾಮಿ ಅಧ್ಯಕ್ಷರಾಗಿ ಸಿಕೆ ಖನ್ನ ಅಧಿಕಾರ ನಿರ್ವಹಿಸುತ್ತಿದ್ದಾರೆ. 

loader