ಇಂಡೋ-ಪಾಕ್ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆ..!

First Published 2, Mar 2018, 10:17 AM IST
BCCI refusal to send Indian team leaves Pakistan tournament in doubt
Highlights

ಏಷ್ಯಾ ಕ್ರಿಕೆಟ್ ಮಂಡಳಿ ಮುಖ್ಯಸ್ಥರೂ ಆಗಿರುವ ಪಿಸಿಬಿ ಅಧ್ಯಕ್ಷ ನಜಂ ಸೇಠಿ, ‘ಸದ್ಯದಲ್ಲೇ ಕೊಲಂಬೊದಲ್ಲಿ ಸಭೆ ನಡೆಸಲಿದ್ದು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಸೆಪ್ಟೆಂಬರ್‌'ನಲ್ಲಿ ಭಾರತದಲ್ಲಿ ನಡೆಯಲಿರುವ ಏಷ್ಯಾಕಪ್‌'ನಲ್ಲಿ ಪಾಕಿಸ್ತಾನದ ಪಾಲ್ಗೊಳ್ಳುವಿಕೆ ಬಗ್ಗೆಯೂ ಪುನರ್ ಚಿಂತನೆ ನಡೆಸಲಾಗುತ್ತದೆ’ ಎಂದಿದ್ದಾರೆ.

ಕರಾಚಿ(ಮಾ.02): ಬಿಸಿಸಿಐ ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕಿತ್ತಾಟ ಮುಂದುವರಿದಿದೆ. ಏಪ್ರಿಲ್‌'ನಲ್ಲಿ ಪಾಕಿಸ್ತಾನದಲ್ಲಿ ನಡೆಯಬೇಕಿರುವ ಏಷ್ಯಾ ಉದಯೋನ್ಮುಖ ರಾಷ್ಟ್ರಗಳ ಕಪ್ ಕ್ರಿಕೆಟ್ ಪಂದ್ಯಾವಳಿಗೆ ತಂಡ ಕಳುಹಿಸುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಪಂದ್ಯಾವಳಿ ಪಾಕಿಸ್ತಾನದಿಂದ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ.

ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧಿಕಾರಿ ‘ಬಿಸಿಸಿಐ ಭಾರತ ತಂಡವನ್ನು ಕಳುಹಿಸುವುದಿಲ್ಲ ಎಂದು ತಿಳಿಸಿದ್ದರಿಂದ ಪಂದ್ಯಾವಳಿ ಶ್ರೀಲಂಕಾ ಇಲ್ಲವೇ ಬಾಂಗ್ಲಾದೇಶಕ್ಕೆ ಸ್ಥಳಾಂತರಗೊಳ್ಳಲಿದೆ’ ಎಂದಿದ್ದಾರೆ. ‘ಎಲ್ಲಾ ರಾಷ್ಟ್ರಗಳು ಪಾಲ್ಗೊಳ್ಳಲಿವೆ ಎಂದು ಖಚಿತಪಡಿಸಿದ ಬಳಿಕವಷ್ಟೇ ಪಂದ್ಯಾವಳಿ ಆಯೋಜಿಸಲು ನಾವು ಒಪ್ಪಿಕೊಂಡಿದ್ದೆವು’ ಎಂದು ಪಿಸಿಬಿ ಅಧಿಕಾರಿ ಹೇಳಿದ್ದಾರೆ.

loader