Asianet Suvarna News Asianet Suvarna News

2ನೇ ಟೆಸ್ಟ್’ಗೆ ಟೀಂ ಇಂಡಿಯಾ ಪ್ರಕಟ; ಯಾರಿಗೆ ಸಿಕ್ಕಿದೆ ಚಾನ್ಸ್..?

ಹೈದರಾಬಾದ್’ನಲ್ಲಿ ನಾಳೆಯಿಂದ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಬಹುತೇಕ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಂಡವೇ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

BCCI to announce India squad for 2nd Test Against West Indies
Author
Bengaluru, First Published Oct 11, 2018, 12:01 PM IST
  • Facebook
  • Twitter
  • Whatsapp

ಬೆಂಗಳೂರು[ಅ.11]: ಶುಕ್ರವಾರದಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ 12 ಆಟಗಾರನ್ನೊಳಗೊಂಡ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ಪ್ರತಿಭಾನ್ವಿತ ಕನ್ನಡಿಗ ಮಯಾಂಕ್ ಅಗರ್’ವಾಲ್ ಮತ್ತೊಮ್ಮೆ ನಿರಾಸೆ ಎದುರಾಗಿದೆ.

ಹೈದರಾಬಾದ್’ನಲ್ಲಿ ನಾಳೆಯಿಂದ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಬಹುತೇಕ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಂಡವೇ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಬೆಂಚ್ ಕಾಯಿಸಿದ್ದ ಅಗರ್’ವಾಲ್’ಗೆ ಎರಡನೇ ಟೆಸ್ಟ್ ಪಂದ್ಯದಲ್ಲಿ ಅವಕಾಶ ಸಿಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅಗರ್’ವಾಲ್ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಲು ಇನ್ನಷ್ಟು ಸಮಯ ಕಾಯಬೇಕಿದೆ.

ರಾಜ್’ಕೋಟ್’ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ತಂಡವು ಇನ್ನಿಂಗ್ಸ್ ಹಾಗೂ 272 ರನ್’ಗಳ ಭರ್ಜರಿ ಜಯ ದಾಖಲಿಸಿತ್ತು. ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಈಗಾಗಲೇ 1-0 ಮುನ್ನಡೆ ಸಾಧಿಸಿದೆ.

ಟೀಂ ಇಂಡಿಯಾ ಪಟ್ಟಿ ಹೀಗಿದೆ..


 

Follow Us:
Download App:
  • android
  • ios