ಇಂಗ್ಲೆಂಡ್ ತಂಡ ಟೀಂ ಇಂಡಿಯಾ 3 ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನಾಡಲಿದೆ.
ನವದೆಹಲಿ(ಜ.04): ಇದೇ 15ರಿಂದ ಆರಂಭವಾಗಲಿರುವ ಭಾರತ ವಿರುದ್ಧದ ಏಕದಿನ ಕ್ರಿಕೆಟ್ ಟೂರ್ನಿಗೆ ಇಂಗ್ಲೆಂಡ್ ತಂಡ ಇನ್ನೊಂದು ವಾರದಲ್ಲಿ ಭಾರತಕ್ಕೆ ಆಗಮಿಸಲಿದೆ. ಇಂತಹ ಪರಿಸ್ಥಿತಿಯಲ್ಲಿ ಸುಪ್ರೀಂ ಕೋರ್ಟ್, ಬಿಸಿಸಿಐ ಅಧ್ಯಕ್ಷರನ್ನು ವಜಾ ಮಾಡಿರುವುದು ಭಾರತೀಯ ಕ್ರಿಕೆಟ್ ಮಂಡಳಿಗೆ ಮುಜುಗುರವನ್ನು ತಂದಿದೆ.
ಇಂಗ್ಲೆಂಡ್ ತಂಡ ಟೀಂ ಇಂಡಿಯಾ 3 ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನಾಡಲಿದೆ.
ಲೋಧಾ ಸಮಿತಿಯ ಶಿಫಾರಸಿನಂತೆ ಸದ್ಯ ನಡೆಯುತ್ತಿರುವ ಕ್ರಿಕೆಟ್ ಚಟುವಟಿಕೆಗಳು ಮತ್ತು ಅಂತಾರಾಷ್ಟ್ರೀಯ ಟೂರ್ನಿಗಳನ್ನು ತಾತ್ಕಲಿಕವಾಗಿ ತಡೆಹಿಡಿಯಬೇಕಾಗಿದೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ನಡೆಸಲು ಕ್ರಿಕೆಟ್ ಮಂಡಳಿ ಹಣ ಬಿಡುಗಡೆ ಮಾಡುವ ಪ್ರಕರಣ ಅಪೆಕ್ಸ್ ಕೋರ್ಟ್‌ನಲ್ಲಿದೆ.
