ಮುಂಬೈ(ಜೂ.21): ಒಂದೇ ಸಮಯದಲ್ಲಿ ಒಂದಕ್ಕಿಂತ ಹೆಚ್ಚು ಹುದ್ದೆ ಅಥವಾ ಜವಾಬ್ದಾರಿ ಹೊಂದಿರುವ ಟೀಂ ಇಂಡಿಯಾ ಮಾಜಿ ಹಾಗೂ ಹಾಲಿ ಕ್ರಿಕೆಟಿಗರಿಗೆ ಇದೀಗ ಬಿಸಿಸಿಐ ಖಡಕ್ ವಾರ್ನಿಂಗ್ ನೀಡಿದೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್, ಸೌರವ್ ಗಂಗೂಲಿ, ವಿವಿಎಸ್ ಲಕ್ಷ್ಮಣ್ ಸೇರಿದಂತೆ ಹಲವು ಕ್ರಿಕೆಟಿಗರಿಗೆ ಬಿಸಿಸಿಐ ನೊಟೀಸ್ ನೀಡಿದೆ. ಸ್ವಹಿತಾಸಕ್ತಿ ನಿಯಮ ಎಲ್ಲರಿಗೂ ಒಂದೇ, ಇದರಲ್ಲಿ ವಿನಾಯಿತಿ ಇಲ್ಲ ಎಂದಿದೆ. 

ಇದನ್ನೂ ಓದಿ: ಈ ದೇಶದ ಟಿ20 ಲೀಗ್‌ನಲ್ಲಿ ಆಡಲಿದ್ದಾರೆ ಯುವಿ!

ಕ್ರಿಕೆಟ್ ಸಲಹಾ ಸಮಿತಿಯಲ್ಲಿರುವ ಸಚಿನ್ ತೆಂಡುಲ್ಕರ್, ವಿವಿಎಸ್ ಲಕ್ಷ್ಮಣ್ ಹಾಗೂ ಸೌರವ್ ಗಂಗೂಲಿ, ವೀಕ್ಷಕ ವಿವರಣೆಯನ್ನೂ ನೀಡುತ್ತಿದ್ದಾರೆ. ಸಚಿನ್ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೆಂಟರ್ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಇತ್ತ ಸೌರವ್ ಗಂಗೂಲಿ ಬಂಗಾಳ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಪರ ಕಾರ್ಯನಿರ್ವಹಿಸುತ್ತಿದ್ದಾರೆ. ಇಷ್ಟೇ ಅಲ್ಲ ವೀಕ್ಷಕ ವಿವರಣೆಗಾರನಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ. 

ಇದನ್ನೂ ಓದಿ: ಶಿಖರ್ ಧವನ್ ಇಂಜುರಿ- ಪ್ರಧಾನಿ ನರೇಂದ್ರ ಮೋದಿ ಟ್ವೀಟ್!

ಲಕ್ಷ್ಮಣ್ ಕೂಡ  ಇದೇ ಹಾದಿಯಲ್ಲಿದ್ದಾರೆ. ಹೀಗಾಗಿ ಯಾವುದಾದರು ಒಂದನ್ನು ಆಯ್ಕೆ ಮಾಡಲು ಬಿಸಿಸಿಐ ಸೂಚಿಸಿದೆ. ತೆಂಡುಲ್ಕರ್, ಗಂಗೂಲಿ, ಲಕ್ಷ್ಮಣ್, ಸುನಿಲ್ ಗವಾಸ್ಕರ್, ಹರ್ಭಜನ್ ಸಿಂಗ್, ಅನಿಲ್ ಕುಂಬ್ಳೆ, ಸಂಜಯ್ ಮಂಜ್ರೆಕರ್, ವಿರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್, ಇರ್ಫಾನ್ ಪಠಾನ್ ಸೇರಿದಂತೆ ಹಲವು ಕ್ರಿಕೆಟಿಗರಿಗೆ ಬಿಸಿಸಿಐ ವಾರ್ನಿಂಗ್ ನೀಡಿದೆ.