ಮೇ.17ರಿಂದ ಪಾಕಿಸ್ತಾನ ವಿರುದ್ಧ ಆರಂಭವಾಗಲಿರುವ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಪಡೆದಿರುವ ಸ್ಟೋಕ್ಸ್ ಹಾಗೂ ಬಟ್ಲರ್ ಐಪಿಎಲ್’ಗೆ ಗುಡ್’ಬೈ ಹೇಳಿದ್ದಾರೆ.
ಜೈಪುರ[ಮೇ.16]: ರಾಜಸ್ಥಾನ ರಾಯಲ್ಸ್ ಮುಂಬರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರಿನ ಪಂದ್ಯದಲ್ಲಿ ತನ್ನ ಸ್ಟಾರ್ ಆಟಗಾರರಾದ ಬೆನ್ ಸ್ಟೋಕ್ಸ್ ಹಾಗೂ ಜೋಸ್ ಬಟ್ಲರ್’ರನ್ನು ಮಿಸ್ ಮಾಡಿಕೊಳ್ಳುತ್ತಿದೆ.
ಮೇ.17ರಿಂದ ಪಾಕಿಸ್ತಾನ ವಿರುದ್ಧ ಆರಂಭವಾಗಲಿರುವ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಪಡೆದಿರುವ ಸ್ಟೋಕ್ಸ್ ಹಾಗೂ ಬಟ್ಲರ್ ಐಪಿಎಲ್’ಗೆ ಗುಡ್’ಬೈ ಹೇಳಿದ್ದಾರೆ. ಪ್ರಸಕ್ತ ಸಾಲಿನ ಐಪಿಎಲ್’ಗೆ ವಿದಾಯ ಹೇಳುವ ಮುನ್ನ ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಸಾಮಾಜಿಕ ಜಾಲತಾಣವಾದ ಇನ್’ಸ್ಟಾಗ್ರಾಂನಲ್ಲಿ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶವನ್ನು ರವಾನಿಸಿದ್ದಾರೆ.
ರಾಜಸ್ಥಾನ ರಾಯಲ್ಸ್ ಪ್ರಾಂಚೈಸಿಯು ಅದ್ಭುತ ವ್ಯಕ್ತಿಗಳನ್ನು ಒಳಗೊಂಡಿದೆ. ವೈಯುಕ್ತಿಕವಾಗಿ ನನ್ನ ಪ್ರದರ್ಶನದ ಬಗ್ಗೆ ನನಗೆ ಬೇಸರವಿದ್ದರೂ, ತಂಡದ ಪ್ರದರ್ಶನದ ಬಗ್ಗೆ ಸಂತೋಷವಿದೆ. ಕಠಿಣ ಪ್ರದರ್ಶನದೊಂದಿಗೆ ತಂಡ ಪ್ಲೇ ಆಫ್ ಹಂತ ಪ್ರವೇಶಿಸಿ ಕಪ್ ಎತ್ತಿಹಿಡಿಯುವುದನ್ನು ನೋಡಲು ಬಯಸುತ್ತೇನೆ ಎಂದು ಬೆನ್ ಸ್ಟೋಕ್ಸ್ ಇನ್’ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
ಈ ಬಾರಿಯ ಆಟಗಾರರ ಹರಾಜಿನಲ್ಲಿ 12.5 ಕೋಟಿ ರುಪಾಯಿಗೆ ರಾಜಸ್ಥಾನ ರಾಯಲ್ಸ್ ಪಾಲಾಗಿದ್ದ ಸ್ಟೋಕ್ಸ್ ಆಡಿದ 13 ಪಂದ್ಯಗಳಲ್ಲಿ 16ರ ಸರಾಸರಿಯಲ್ಲಿ ಕೇವಲ 196 ರನ್’ಗಳನ್ನಷ್ಟೇ ಬಾರಿಸಿದ್ದರು.

Last Updated 16, May 2018, 6:22 PM IST