ಇಲ್ಲಿನ ಎಸ್‌ಎನ್‌ಡಿಆರ್ ಒಡೆಯರ್ ಮೈದಾನದಲ್ಲಿ ನಡೆದ ಮೊದಲ ಸೆಮೀಸ್ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಬೆಂಗಳೂರು 9 ವಿಕೆಟ್‌ಗೆ 138 ರನ್‌ಗಳಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಮೈಸೂರು 20 ಓವರ್‌ಗಳಲ್ಲಿ 9 ವಿಕೆಟ್‌ಗೆ 118 ರನ್‌ಗಳಿಸಲಷ್ಟೇ ಶಕ್ತವಾಯಿತು.

ಮೈಸೂರು[ಸೆ.05]: ಶ್ರೇಯಸ್ ಗೋಪಾಲ್ (13ಕ್ಕೆ3) ಮತ್ತು ಆನಂದ್ ದೊಡ್ಡಮನಿ (16ಕ್ಕೆ2) ಅದ್ಭುತ ಪ್ರದರ್ಶನದ ನೆರವಿನಿಂದ ಬೆಂಗಳೂರು ಬ್ಲಾಸ್ಟರ್ಸ್, 7ನೇ ಆವೃತ್ತಿಯ ಕೆಪಿಎಲ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ವಿರುದ್ಧ 20 ರನ್‌ಗಳ ಗೆಲುವು ಸಾಧಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದರೊಂದಿಗೆ ಬೆಂಗಳೂರು ಬ್ಲಾಸ್ಟರ್ಸ್ ಲೀಗ್‌ನಲ್ಲಿ ಫೈನಲ್ ಪ್ರವೇಶಿಸಿದೆ. ಮಂಗಳವಾರ ಇಲ್ಲಿನ ಎಸ್‌ಎನ್‌ಡಿಆರ್ ಒಡೆಯರ್ ಮೈದಾನದಲ್ಲಿ ನಡೆದ ಮೊದಲ ಸೆಮೀಸ್ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಬೆಂಗಳೂರು 9 ವಿಕೆಟ್‌ಗೆ 138 ರನ್‌ಗಳಿಸಿತು.

ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಮೈಸೂರು 20 ಓವರ್‌ಗಳಲ್ಲಿ 9 ವಿಕೆಟ್‌ಗೆ 118 ರನ್‌ಗಳಿಸಲಷ್ಟೇ ಶಕ್ತವಾಯಿತು. ಮೈಸೂರು ಪರ ಆರಂಭಿಕ ಅರ್ಜುನ್ ಹೊಯ್ಸಳ (52) ರನ್‌ಗಳಿಸಿದರು.
ಉಳಿದಂತೆ 8 ಬ್ಯಾಟ್ಸ್‌ಮನ್‌ಗಳು ಒಂದಂಕಿ ಮೊತ್ತ ದಾಟಲಿಲ್ಲ.

ಸಂಕ್ಷಿಪ್ತ ಸ್ಕೋರ್:

ಬೆಂಗಳೂರು 138/9,
ಮೈಸೂರು ವಾರಿಯರ್ಸ್ 118/9