ಭರತ್ ಅರುಣ್ 2014ರಿಂದ 2016ರವರೆಗೆ ಟೀಂ ಇಂಡಿಯಾ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.

ನವದೆಹಲಿ(ಜು.16): ಟೀಂ ಇಂಡಿಯಾದ ನೂತನ ಪೂರ್ಣಾವಧಿ ಬೌಲಿಂಗ್ ಕೋಚ್ ಆಗಿ ಭರತ್ ಅರುಣ್ ಅವರನ್ನು ಬಿಸಿಸಿಐ ನೇಮಕ ಮಾಡಿದೆ ಎಂದು ವರದಿಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರವಿಶಾಸ್ತ್ರಿ ಟೀಂ ಇಂಡಿಯಾ ಮುಖ್ಯಕೋಚ್ ಆಗಿ ನೇಮಕವಾದ ಬೆನ್ನಲ್ಲೇ ಜಹೀರ್ ಖಾನ್ ಹಾಗೂ ರಾಹುಲ್ ದ್ರಾವಿಡ್ ಅವರನ್ನು ಕ್ರಮವಾಗಿ ಬೌಲಿಂಗ್ ಹಾಗೂ ಬ್ಯಾಟಿಂಗ್ ಸಲಹೆಗಾರರನ್ನಾಗಿ ಕ್ರಿಕೆಟ್ ಸಲಹಾ ಸಮಿತಿ ನೇಮಿಸಿತ್ತು.

ಆದರೆ ರವಿಶಾಸ್ತ್ರಿ ಭರತ್ ಅರುಣ್ ಅವರನ್ನು ಬೌಲಿಂಗ್ ಕೋಚ್ ಆಗಿ ನೇಮಕ ಮಾಡಬೇಕೆಂದು ಬಯಸಿದ್ದರು. ಅಂತಿಮವಾಗಿ ಶಾಸ್ತ್ರಿ ಒತ್ತಡಕ್ಕೆ ಮಣಿದ ಬಿಸಿಸಿಐ ಭರತ್ ಅರುಣ್ ಅವರನ್ನು ಬೌಲಿಂಗ್ ಕೋಚ್ ಆಗಿ ನೇಮಿಸಿದೆ ಎನ್ನಲಾಗುತ್ತಿದೆ.

ಜಹೀರ್ ಖಾನ್ ವರ್ಷದಲ್ಲಿ ಕೇವಲ 5 ತಿಂಗಳು ಮಾತ್ರ ಕೋಚ್ ಆಗಲು ಒಪ್ಪಿಕೊಂಡಿದ್ದರು. ಆದರೆ ಶಾಸ್ತ್ರಿ ಪೂರ್ಣಾವಧಿ ಬೌಲಿಂಗ್ ಬೇಕೆಂದು ಬಯಸಿದ್ದರು. ಈ ಕಾರಣದಿಂದಲೇ ಅರುಣ್ ಅವರನ್ನು ಕೋಚ್ ಆಗಿ ನೇಮಿಸಲಾಗಿದೆ ಎನ್ನಲಾಗುತ್ತಿದೆ.

ಭರತ್ ಅರುಣ್ 2014ರಿಂದ 2016ರವರೆಗೆ ಟೀಂ ಇಂಡಿಯಾ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.