ವೈಯಕ್ತಿಕ ಕಾರಣಗಳಿಂದಾಗಿ ಈ ಇಬ್ಬರೂ ಆಟಗಾರರು ಲಂಕಾ ಎದುರಿನ 2ನೇ ಪಂದ್ಯದಲ್ಲಿ ಆಡುತ್ತಿಲ್ಲ. ಭುವನೇಶ್ವರ್ ಬದಲಿಗೆ ತಮಿಳುನಾಡಿನ ಆಲ್ರೌಂಡರ್ ವಿಜಯ್ ಶಂಕರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ನವದೆಹಲಿ: ಇದೇ ನ.24ರಿಂದ 28ರ ವರೆಗೆ ನಾಗ್ಪುರದಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಮತ್ತು ವೇಗದ ಬೌಲರ್ ಭುವನೇಶ್ವರ್ ಕುಮಾರ್ ಅಲಭ್ಯರಾಗಿದ್ದಾರೆ.

ವೈಯಕ್ತಿಕ ಕಾರಣಗಳಿಂದಾಗಿ ಈ ಇಬ್ಬರೂ ಆಟಗಾರರು ಲಂಕಾ ಎದುರಿನ 2ನೇ ಪಂದ್ಯದಲ್ಲಿ ಆಡುತ್ತಿಲ್ಲ. ಭುವನೇಶ್ವರ್ ಬದಲಿಗೆ ತಮಿಳುನಾಡಿನ ಆಲ್ರೌಂಡರ್ ವಿಜಯ್ ಶಂಕರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಜಯ್ ಶಂಕರ್‌ಗೆ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಟೆಸ್ಟ್ ತಂಡದಲ್ಲಿ ಅವಕಾಶ ನೀಡಲಾಗಿದ್ದು, ಅಂತಿಮ 11ರ ಬಳಗದಲ್ಲಿನ ಸ್ಥಾನ ಖಚಿತವಾಗಿಲ್ಲ. ಇನ್ನೂ ಧವನ್ 3ನೇ ಟೆಸ್ಟ್ ಪಂದ್ಯಕ್ಕೆ ಲಭ್ಯ ಇರಲಿದ್ದಾರೆ ಎನ್ನಲಾಗಿದೆ.