ಬೆಂಗಳೂರು[ಫೆ.05]: ಟೀಂ ಇಂಡಿಯಾದ ಸ್ವಿಂಗ್ ಸ್ಪೆಷಲಿಸ್ಟ್ ಭುವನೇಶ್ವರ್ ಕುಮಾರ್ ಇಂದು 29ನೇ ವಸಂತಕ್ಕೆ ಕಾಲಿಸಿರಿಸಿದ್ದಾರೆ. ಭಾರತ ತಂಡದ ಪ್ರಮುಖ ವೇಗದ ಬೌಲರ್ ಆಗಿ ಗುರುತಿಸಿಕೊಂಡಿರುವ ಭುವಿಗೆ ಹುಟ್ಟು ಹಬ್ಬದ ಮಹಾಪೂರವೇ ಹರಿದು ಬರುತ್ತಿದೆ.

ಟೆಸ್ಟ್, ಏಕದಿನ ಹಾಗೂ ಟಿ20 ಅಂತರಾಷ್ಟ್ರೀಯ ಕ್ರಿಕೆಟ್’ನಲ್ಲಿ 5+ ವಿಕೆಟ್ ಕಬಳಿಸಿದ ಭಾರತದ ಮೊದಲ ಕ್ರಿಕೆಟಿಗ ಎನ್ನುವ ಸಾಧನೆಯನ್ನು ಭುವನೇಶ್ವರ್ ಕುಮಾರ್ ಮಾಡಿದ್ದಾರೆ. 2012ರಲ್ಲಿ ಪಾಕಿಸ್ತಾನ ವಿರುದ್ಧ ಬೆಂಗಳೂರಿನಲ್ಲಿ ನಡೆದ ಟಿ20 ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಅಂತರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ್ದರು. ಏಕದಿನ ಕ್ರಿಕೆಟ್’ನ ಪದಾರ್ಪಣಾ ಪಂದ್ಯದ ಮೊದಲ ಎಸೆತದಲ್ಲೇ ಮೊಹಮ್ಮದ್ ಹಫೀಜ್ ವಿಕೆಟ್ ಪಡೆಯುವ ಮೂಲಕ ಡ್ರೀಮ್ ಆರಂಭ ಪಡೆದಿದ್ದರು. ಇದುವರೆಗೆ ಮೂರು ಮಾದರಿಯ ಕ್ರಿಕೆಟ್’ನಲ್ಲಿ ಭುವಿ 210 ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ. 

ಭಾರತ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ, ಆದರೆ...?

2018ರಲ್ಲಿ ಗಾಯದ ಸಮಸ್ಯೆಯಿಂದಾಗಿ ಬಹುತೇಕ ತಂಡದಿಂದ ಹೊರಗುಳಿದಿದ್ದ ಭುವಿ 14 ಪಂದ್ಯಗಳನ್ನಾಡಿ ಕೇವಲ 11 ವಿಕೆಟ್ ಕಬಳಿಸಿದ್ದಾರೆ. ಇನ್ನು ಪ್ರಸಕ್ತ ವರ್ಷ ಇದುವರೆಗೆ 8 ಪಂದ್ಯಗಳನ್ನಾಡಿ 15 ವಿಕೆಟ್ ಪಡೆದಿದ್ದಾರೆ. ಮುಂಬರುವ ಏಕದಿನ ವಿಶ್ವಕಪ್’ನಲ್ಲಿ ಬುಮ್ರಾ, ಶಮಿ ಜತೆ ಭುವಿ ವೇಗದ ಬೌಲಿಂಗ್ ಸಾರಥ್ಯ ವಹಿಸಲಿದ್ದಾರೆ.