ಡೆಹರಾಡೂನ್(ನ.05): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 30ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ  ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿರುವ ಕೊಹ್ಲಿ, ಪತ್ನಿ ಅನುಷ್ಕಾ ಶರ್ಮಾ ಜೊತೆ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ.

30ನೇ ವಸಂತಕ್ಕೆ ಕಾಲಿಟ್ಟ ವಿರಾಟ್ ಕೊಹ್ಲಿ ಕ್ರಿಕೆಟಿಗರು, ಬಾಲಿವುಡ್ ದಿಗ್ಗಜರು, ಅಭಿಮಾನಿಗಳು ಸೇರಿದಂತೆ ಹಲವರು ಶುಭಕೋರಿದ್ದಾರೆ. ಹುಟ್ಟುಹಬ್ಬಕ್ಕೆ ಶುಭಕೋರಿದ ಎಲ್ಲರಿಗೂ ಕೊಹ್ಲಿ ಧನ್ಯವಾದ ಅರ್ಪಿಸಿದ್ದಾರೆ. 

 

 

ಇದೇ ವೇಳೆ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ. ಕೊಹ್ಲಿ  ಕುರಿತು ಹೆಚ್ಚಿನ ಮಾಹಿತಿಗಾಗಿ ವಿರಾಟ್ ಕೊಹ್ಲಿ ಆ್ಯಪ್ ಲಾಂಚ್ ಮಾಡಿದ್ದಾರೆ. ಈ ಮೂಲಕ ಅಭಿಮಾನಿಗಳು ಕೊಹ್ಲಿ ಜೊತೆ ನೇರ ಸಂಪರ್ಕ ಸಾಧಿಸಲು ಸಾಧ್ಯ ಎಂದು ಕೊಹ್ಲಿ ಹೇಳಿದ್ದಾರೆ.