ಅಂಧರ್ ಟಿ20 ಕ್ರಿಕೆಟ್‌ನಲ್ಲಿ ಕನ್ನಡಿಗ ಸುನಿಲ್ ಆರ್ಭಟಕ್ಕೆ ಭಾರತ ಗೆಲುವಿನ ನಗೆ ಬೀರಿದೆ. ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದ ಹೈಲೈಟ್ಸ್ ಇಲ್ಲಿದೆ.

ಮುಂಬೈ(ಅ.17): ದೀಪಕ್‌ ಮಲಿಕ್‌ ಭರ್ಜರಿ ಶತಕ ಮತ್ತು ಕನ್ನಡಿಗ ಸುನಿಲ್‌ ರಮೇಶ್‌ ಆಲ್ರೌಂಡ್‌ ಆಟದ ನೆರವಿನಿಂದ ಭಾರತ ಅಂಧರ ತಂಡ, ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ 34 ರನ್‌ಗಳ ಗೆಲುವು ದಾಖಲಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದರೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿದೆ. ಮಂಗಳವಾರ ಇಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಭಾರತ 20 ಓವರ್‌ಗಳಲ್ಲಿ 2 ವಿಕೆಟ್‌ಗೆ 236 ರನ್‌ಗಳಿಸಿತು. 

ಈ ಗುರಿ ಬೆನ್ನಟ್ಟಿದ ಶ್ರೀಲಂಕಾ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 202 ರನ್‌ಗಳಿಸಿ ಸೋಲೊಪ್ಪಿಕೊಂಡಿತು. ಸಂಕ್ಷಿಪ್ತ ಸ್ಕೋರ್‌: ಭಾರತ 236/2, ಶ್ರೀಲಂಕಾ 202/9