ಆ್ಯಂಟಿಗುವಾ(ಆ.18): ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಂ ಇಂಡಿಯಾ 3 ದಿನಗಳ ಅಭ್ಯಾಸ ಪಂದ್ಯ ಆಡುತ್ತಿದೆ. ಏಕದಿನ ಸರಣಿ ಗೆದ್ದ ಬೆನ್ನಲ್ಲೇ ಆ್ಯಂಟಿಗುವಾಗೆ ಆಗಮಿಸಿದ ಭಾರತ ತಂಡಕ್ಕೆ ವೆಸ್ಟ್ ಇಂಡೀಸ್ ಮಾಜಿ ದಿಗ್ಗಜ ಕ್ರಿಕೆಟಿಗ ಬ್ರಿಯಾನ್ ಲಾರಾ ಬರ್ಜರಿ ಪಾರ್ಟಿ ಆಯೋಜಿಸಿದ್ದರು. ಈ ಪಾರ್ಟಿಯಲ್ಲಿ ವಿಂಡೀಸ್ ಕ್ರಿಕೆಟಿಗರು ಕೂಡ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಅಭ್ಯಾಸ ಪಂದ್ಯ: ಪೂಜಾರ ಭರ್ಜರಿ ಶತಕ

ಕೆರಿಬಿಯನ್ ನಾಡಿನಲ್ಲಿ ಪಾರ್ಟಿ, ಮೋಜು ಮಸ್ತಿ ಸಾಮಾನ್ಯ. ಲಾರಾ ತಮ್ಮ ಮನೆಯಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರೆಲ್ಲಾ ಪಾಲ್ಗೊಂಡಿದ್ದರು. ವೆಸ್ಟ್ ಇಂಡೀಸ್‌ನ ಮಾಜಿ ಕ್ರಿಕೆಟಿಗ ಡ್ವೇನ್ ಬ್ರಾವೋ, ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್, ಕೀರನ್ ಪೊಲಾರ್ಡ್, ಸುನಿಲ್ ನರೈನ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

 

ಇದನ್ನೂ ಓದಿ: ಒಂದು ದಶಕದಲ್ಲಿ ಕೊಹ್ಲಿ 20 ಸಾವಿರ ರನ್; ದಿಗ್ಗಜರ ದಾಖಲೆ ಪುಡಿ ಪುಡಿ!

ಪಾರ್ಟಿ ಬಳಿಕ ಡ್ವೇನ್ ಬಾರ್ವೋ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ಸದ್ಯ ವಿಂಡೀಸ್ ವಿರುದ್ಧದ ಅಭ್ಯಾಸ ಪಂದ್ಯ ಆಡುತ್ತಿರುವ ಟೀಂ ಇಂಡಿಯಾ, ಆಗಸ್ಟ್ 22 ರಿಂದ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಟಿ20 ಹಾಗೂ ಏಕದಿನ ಸರಣಿ ಗೆದ್ದಿರುವ ಟೀಂ ಇಂಡಿಯಾ ಇದೀಗ ಟೆಸ್ಟ್ ಸರಣಿ ಕೈವಶ ಮಾಡಲು ಸಜ್ಜಾಗಿದೆ.