ಭಾರತೀಯ ಕುಸ್ತಿ ಫೆಡರೇಷನ್‌ನ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಅವರ ಆಪ್ತ ಸಂಜಯ್‌ ಸಿಂಗ್‌ ಡಬ್ಲ್ಯುಎಫ್‌ಐನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲಿಯೇ ಸಾಕ್ಷಿ ಮಲೀಕ್‌ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟು, ತಾವು ರೆಸ್ಲಿಂಗ್‌ ತೊರೆಯುವುದಾಗಿ ಘೋಷಣೆ ಮಾಡಿದ್ದಾರೆ.

ನವದೆಹಲಿ (ಡಿ..21): ಸುಪ್ರೀಂ ಕೋರ್ಟ್‌ ಆದೇಶದಂತೆ ಭಾರತೀಯ ಕುಸ್ತಿ ಫೆಡರೇಷನ್‌ಗೆ ನಡೆದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ಸಿಂಗ್‌ ಅವರ ಆಪ್ತ ಸಂಜಯ್‌ ಸಿಂಗ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲಿಯೇ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟೇ ಮಾತನಾಡಿದ ಸಾಕ್ಷಿ ಮಲೀಕ್‌ ತಾವು ರೆಸ್ಲಿಂಗ್‌ ತೊರೆಯುವುದಾಗಿ ಘೋಷಣೆ ಮಾಡಿದ್ದಾರೆ. ಇನ್ನು ಸಾಕ್ಷಿ ಮಲೀಕ್‌ ಅವರು ರೆಸ್ಲಿಂಗ್‌ ಅನ್ನು ತೊರೆಯುವುದಾಗಿ ಘೋಷಣೆ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಬ್ರಿಜ್‌ ಭೂಷಣ್‌ ಸಿಂಗ್‌, ಅದಕ್ಕೆ ತಾವೇನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಚುನಾವಣೆ ಮುಗಿದ ನಂತರ, ಸಾಕ್ಷಿ ಮಲಿಕ್ ದೊಡ್ಡ ಘೋಷಣೆ ಮಾಡಿದ್ದಾರೆ. ತಾನು ಕುಸ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಕಣ್ಣೀರಿಡುತ್ತಲೇ ಹೇಳಿದರು. ಅದೇ ಸಮಯದಲ್ಲಿ, ಯುವ ಕ್ರೀಡಾಪಟುಗಳಿಗೆ ಅನ್ಯಾಯವನ್ನು ಎದುರಿಸಲು ಸಿದ್ಧರಾಗಿರಿ. ಕುಸ್ತಿಯ ಭವಿಷ್ಯ ಅಂಧಕಾರದಲ್ಲಿದೆ ಎಂದು ನಾನು ಹೇಳಲು ಬಯಸುತ್ತೇನೆ ಎಂದು ಕುಸ್ತಿಪಟು ವಿನೇಶ್ ಫೋಗಟ್ ಹೇಳಿದರು.

ನಾವು 40 ದಿನಗಳ ಕಾಲ ಬೀದಿಯಲ್ಲಿ ಮಲಗಿದ್ದೆವು ಮತ್ತು ದೇಶದ ಅನೇಕ ಭಾಗಗಳಿಂದ ನಮಗೆ ಬೆಂಬಲ ವ್ಯಕ್ತವಾಗಿತ್ತು ಎಂದು ಸಾಕ್ಷಿ ಮಲೀಕ್‌ ಸುದ್ದಿಗೋಷ್ಠಿಯಲ್ಲಿ ಹೇಳಿದರು. ವೃದ್ಧರು, ಬಡವರು, ಅನಾಥರು ಎಲ್ಲರೂ ನಮ್ಮ ಬೆಂಬಲಕ್ಕೆ ಬಂದಿದ್ದರು. ಆದರೆ, ಚುನಾವಣೆಯಲ್ಲಿ ನಾವು ಗೆಲ್ಲಲಿಲ್ಲ, ಆದರೆ ಎಲ್ಲರಿಗೂ ಧನ್ಯವಾದಗಳು. ನಾವು ನಮ್ಮ ಹೃದಯದಿಂದ ಹೋರಾಡಿದ್ದೇವೆ, ಆದರೆ ಡಬ್ಲ್ಯುಎಫ್‌ಐ ಮಾಜಿ ಅಧ್ಯಜ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವ್ಯಾಪಾರ ಪಾಲುದಾರ ಮತ್ತು ಆಪ್ತ ಸಂಜಯ್ ಸಿಂಗ್ ಆಯ್ಕೆಯಾದರೆ, ನಾನು ನನ್ನ ಕುಸ್ತಿಯನ್ನು ತ್ಯಜಿಸುತ್ತೇನೆ ಎಂದು ಈ ಹಿಂದೆಯೇ ಹೇಳಿದ್ದೆ. ಈಗ ಅವರು ಆಯ್ಕೆಯಾಗಿದ್ದಾರೆ ಎಂದು ಹೇಳುವ ಹೊತ್ತಿಗೆ ರೆಸ್ಲಿಂಗ್‌ಗೆ ನಿವೃತ್ತಿ ನೀಡುತ್ತಿದ್ದೇನೆ ಎನ್ನುವ ಮಾತು ಹೇಳಿ ತಮ್ಮ ಬೂಟುಗಳನ್ನು ಮೇಜಿನ ಮೇಲೆ ಇಟ್ಟರು.

ಅದೇ ವೇಳೆ, ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಸಂಬಂಧಿಸಿದ ಯಾರೂ ಫೆಡರೇಶನ್‌ಗೆ ಬರುವುದಿಲ್ಲ ಎಂದು ಕ್ರೀಡಾ ಸಚಿವರು ಹೇಳಿದದರು. ಆದರೆ ಹೆಣ್ಣು ಮಕ್ಕಳಿಗೆ ನ್ಯಾಯ ಸಿಕ್ಕಿದೆ ಎಂದು ನಾನು ಭಾವಿಸುವುದಿಲ್ಲ ಎಂದು ಕುಸ್ತಿಪಟು ಬಜರಂಗ್ ಪುನಿಯಾ ಹೇಳಿದರು. ಇಂದಿನ ಚುನಾವಣೆಯಲ್ಲಿ ಬ್ರಿಜ್‌ ಭೂಷಣ್‌ ಅವರ ಆಪ್ತ ವ್ಯಕ್ತಿ ಗೆದ್ದಿದ್ದಾರೆ. ನ್ಯಾಯಾಂಗದ ಮೇಲೆ ನನಗೆ ನಂಬಿಕೆ ಇದೆ ಅವರು ನ್ಯಾಯ ಕೊಡಿಸುತ್ತಾರೆ ಎಂದು ಹೇಳಿದರು. ಅಲ್ಲದೆ ಮುಂದಿನ ತಲೆಮಾರುಗಳು ಕೂಡ ನ್ಯಾಯಕ್ಕಾಗಿ ಹೋರಾಡುತ್ತಲೇ ಇರುವಂತೆ ತೋರುತ್ತಿದೆ ಎಂದು ಹೇಳಿದರು. ಸರ್ಕಾರ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ ಎಂದಿದ್ದಾರೆ.

ಇಂದು, ಡಬ್ಲ್ಯುಎಫ್‌ಐ,, ಖಜಾಂಚಿ, ಪ್ರಧಾನ ಕಾರ್ಯದರ್ಶಿ ಮತ್ತು ಹಿರಿಯ ಉಪಾಧ್ಯಕ್ಷ ಸೇರಿದಂತೆ 15 ಹುದ್ದೆಗಳಿಗೆ ದೆಹಲಿಯಲ್ಲಿ ಚುನಾವಣೆ ನಡೆಯಿತು. ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆರಾನ್ ಮತ್ತು ಉತ್ತರ ಪ್ರದೇಶ ಕುಸ್ತಿ ಫೆಡರೇಶನ್ ಉಪಾಧ್ಯಕ್ಷ ಸಂಜಯ್ ಸಿಂಗ್ ನಡುವೆ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆದಿತ್ತು. ಇದರಲ್ಲಿ ಸಂಜಯ್ ಸಿಂಗ್ ಮೇಲುಗೈ ಸಾಧಿಸಿದರು.

ಇಂದು ಬಹುನಿರೀಕ್ಷಿತ ಕುಸ್ತಿ ಫೆಡರೇಷನ್ ಚುನಾವಣೆ: ಬ್ರಿಜ್‌ಭೂಷಣ್ ಸಿಂಗ್ ಆಪ್ತರದ್ದೇ ಮೇಲುಗೈ?

ಸಂಜಯ್ ಸಿಂಗ್ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಿಕಟ ಸಹವರ್ತಿಯಾಗಿದ್ದಾರೆ, ಅವರು ಕುಸ್ತಿಯ ವೈಭವದ ದಿನಗಳನ್ನು ಮರಳಿ ತರುವುದಾಗಿ ಭರವಸೆ ನೀಡಿದ್ದಾರೆ. ಆದಾಗ್ಯೂ, ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ಇತರ ಕುಸ್ತಿಪಟುಗಳು ಸಂಜಯ್ ಸಿಂಗ್ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ವಿರೋಧ ಹೊಂದಿದ್ದರು, ಅವರು ತಿಂಗಳ ಆರಂಭದಲ್ಲಿ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿಯಾಗಿ ತಮ್ಮ ಆತಂಕ ತೋಡಿಕೊಂಡಿದ್ದರು.

WFI Elections: ಡಿಸೆಂಬರ್ 8ರ ಬಳಿಕ ಕುಸ್ತಿ ಸಂಸ್ಥೆ ಎಲೆಕ್ಷನ್‌ ದಿನಾಂಕ ನಿಗದಿ

Scroll to load tweet…