ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಏಕದಿನ ಸರಣಿಯನ್ನು 4-1 ಅಂತರದಿಂದ ಕೈವಶ ಮಾಡಿಕೊಂಡಿದ್ದ ಕೊಹ್ಲಿ ಪಡೆ, ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿದೆ.
ಕಾನ್ಪುರ(ಅ.30): ಟೀಂ ಇಂಡಿಯಾದ ವೇಗಿಗಳಾದ ಭುವನೇಶ್ವರ್ ಕುಮಾರ್ ಹಾಗೂ ಜಸ್'ಪ್ರೀತ್ ಬುಮ್ರಾ ವಿಶ್ವದ ಶ್ರೇಷ್ಠ ಡೆತ್ ಓವರ್ ಬೌಲರ್'ಗಳು ಎಂದು ಭಾರತದ ತಂಡದ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಹೇಳಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಕೊನೆಯ ಏಕದಿನ ಪಂದ್ಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಭುವಿ-ಬುಮ್ರಾ ಜೋಡಿಯನ್ನು ರೋಹಿತ್ ಕೊಂಡಾಡಿದ್ದಾರೆ. ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧವೂ ಪರಿಣಾಮಕಾರಿಯಾಗಿ ಬೌಲಿಂಗ್ ನಡೆಸಿದ್ದ ಈ ಜೋಡಿ, ಕಿವೀಸ್ ವಿರುದ್ಧದ ಸರಣಿಯಲ್ಲಿ ಅದ್ಭುತ ಬೌಲಿಂಗ್ ಸಂಘಟಿಸಿತು. ನನ್ನ ಪ್ರಕಾರ ಬುಮ್ರಾ-ಭುವಿ ಜೋಡಿ ಒತ್ತಡದ ಸಂದರ್ಭದಲ್ಲೂ ಪರಿಣಾಮಕಾರಿಯಾಗಿ ದಾಳಿ ನಡೆಸುವ ಇವರನ್ನು ಶ್ರೇಷ್ಠ ಡೆತ್ ಓವರ್'ಗಳ ಜೋಡಿ ಎಂದರೆ ಅತಿಶಯೋಕ್ತಿಯಾಗಲಾರದು ಎಂದು ರೋಹಿತ್ ಅಭಿಪ್ರಾಯ ಪಟ್ಟಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಏಕದಿನ ಸರಣಿಯನ್ನು 4-1 ಅಂತರದಿಂದ ಕೈವಶ ಮಾಡಿಕೊಂಡಿದ್ದ ಕೊಹ್ಲಿ ಪಡೆ, ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿದೆ.