"ನಾನು ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ ಸಾಧ್ಯತೆ ಕಡಿಮೆ" ಎಂದು ರಾಹುಲ್ ಹೇಳಿದ್ದಾರೆ.

ನವದೆಹಲಿ(ಏ.21): ಮುಂದಿನ ಜೂನ್ 1ರಿಂದ ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕದ ಬ್ಯಾಟ್ಸ್‌ಮನ್ ಲೋಕೇಶ್ ರಾಹುಲ್ ಕಣಕ್ಕಿಳಿಯುವ ಸಾಧ್ಯತೆ ಕ್ಷೀಣಿಸಿದೆ.

Add Asianetnews Kannada as a Preferred SourcegooglePreferred

ಭುಜದ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರಾಹುಲ್, ಸದ್ಯ ನಡೆಯುತ್ತಿರುವ ಐಪಿಎಲ್ ಟೂರ್ನಿಯಿಂದಲೂ ಹೊರಗುಳಿದಿದ್ದರು. ಇದೀಗ ಚಾಂಪಿಯನ್ಸ್ ಟೂರ್ನಿಯಲ್ಲಿ ಆಡುವುದು ಅನುಮಾನ ಮೂಡಿಸಿದೆ.

"ನಾನು ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ ಸಾಧ್ಯತೆ ಕಡಿಮೆ" ಎಂದು ರಾಹುಲ್ ಹೇಳಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ವೇಳೆ ಗಾಯಗೊಂಡಿದ್ದ ರಾಹುಲ್, ಸರಣಿ ಮುಕ್ತಾಯದ ಬಳಿಕ ವಿದೇಶದಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿದ್ದರು. ಕೆಲ ದಿನಗಳ ಹಿಂದಷ್ಟೇ ಭಾರತಕ್ಕೆ ಬಂದಿಳಿದ ರಾಹುಲ್, ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಮತ್ತು ಪುಣೆ ವಿರುದ್ಧದ ಪಂದ್ಯದ ವೇಳೆ ಕಾಣಿಸಿಕೊಂಡಿದ್ದರು. ರಾಹುಲ್ 2-3 ತಿಂಗಳುಗಳ ಕಾಲ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ.